ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ, ಇಬ್ಬರ ಬಂಧನ

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಶನಿವಾರ ತಡ ರಾತ್ರಿ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ವಾಹನ ಸಹಿತ 6 ಗೋವುಗಳನ್ನು ವಶಕ್ಕೆ ಪಡೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಹಳೇಬೀಡು ನಿವಾಸಿ ಅಬ್ದುಲ್ ಕರೀಂ ಮತ್ತು ಹೊಳೆನರಸೀಪುರದ ಮಜೀದ್ ಪಾಶ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು 34ನೇ ನೆಕ್ಕಿಲಾಡಿ ಸಮೀಪದ ಗಸ್ತು ತಿರುಗುತ್ತಿದ್ದ ವೇಳೆಯಲ್ಲಿ ಅರೋಪಿಗಳು ಆಪೆ ರಿಕ್ಷಾದಲ್ಲಿ ಜಾನುವಾರುಗಳನ್ನು ಯಾವುದೇ ಪರವಾನಿಗೆಯಿಲ್ಲದೆ ಅಕ್ರಮಗಾಗಿ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿತ್ತು.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





