ಮಂಗಳೂರಿಗೆ ವಿಮಾನದಲ್ಲಿ ಹೊರಟಿದ್ದ ಸಚಿವ ಯು.ಟಿ ಖಾದರ್ ಬೆಂಗಳೂರಿಗೆ ವಾಪಸ್
.jpg)
ಬೆಂಗಳೂರು, ಜೂ.26: ಮಂಗಳೂರಿಗೆ ಹೊರಟಿದ್ದ ಜೆಟ್ ಏರ್‌ವೇಸ್ ವಿಮಾನ ಇಂದು ಸಂಜೆ ಹವಾಮಾನ ವೈಪರೀತ್ಯದಿಂದಾಗಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೆ ವಾಪಸ್ ಬೆಂಗಳೂರಿಗೆ ಬಂದಿದ್ದು, ಊರಿಗೆ ಹೊರಟಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಮರಳಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಈ ವಿಮಾನದಲ್ಲಿ ಮಂಗಳೂರಿಗೆ ತೆರಳಿದ್ದರು. ಆದರೆ ಅವರಿಗೆ ವಿಮಾನ ಲ್ಯಾಂಡ್ ಆಗದ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿಗೆ ಹಿಂತಿರುಗಿದ್ದಾರೆ.
ವಿಮಾನ ಸಂಜೆ 4:10ಕ್ಕೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಪಸಾಗಿದೆ.ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story





