ಮಂಗಳೂರು:ಳ ಉತ್ತರ ಪೊಲೀಸ್ ಠಾಣೆ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಂಗಳೂರು, ಜೂ.26: ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಇಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ಮನೋಪರಿಣಾಮಕಾರಿ ಉತ್ಪನ್ನಗಳ ವಿರುದ್ದ ಇಂದು ಸಿಟಿ ಸೆಂಟರ್ ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸಲು ಬೀದಿ ನಾಟಕವನ್ನು ಆಯೋಜಿಸಲಾಯಿತು.
ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಿದರು. ಮಂಗಳೂರು ಡಿಸಿಪಿ ಡಾ.ಸಂಜೀವ್ ಎಂ ಪಾಟೀಲ್ ಜಾಥಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಾಂತರಾಮ್, ಸಬ್ ಇನ್ಸ್‌ಪೆಕ್ಟರ್ ಮದನ್ ಉಪಸ್ಥಿತರಿದ್ದರು.
Next Story





