Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಬಲ್ಡನ್ ಟೆನಿಸ್ ಟೂರ್ನಿ ಇಂದು ಆರಂಭ

ವಿಂಬಲ್ಡನ್ ಟೆನಿಸ್ ಟೂರ್ನಿ ಇಂದು ಆರಂಭ

ಹ್ಯಾಟ್ರಿಕ್ ಪ್ರಶಸ್ತಿ ಮೇಲೆ ಜೊಕೊವಿಕ್ ಕಣ್ಣು

ವಾರ್ತಾಭಾರತಿವಾರ್ತಾಭಾರತಿ26 Jun 2016 11:47 PM IST
share
ವಿಂಬಲ್ಡನ್ ಟೆನಿಸ್ ಟೂರ್ನಿ ಇಂದು ಆರಂಭ

ಲಂಡನ್, ಜೂ.26: ವಿಂಬಲ್ಡನ್ ಟೆನಿಸ್ ಟೂರ್ನಿ ಸೋಮವಾರದಿಂದ ಇಲ್ಲಿ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ನೊವಾಕ್ ಜೊಕೊವಿಕ್ ‘ಹ್ಯಾಟ್ರಿಕ್’ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ. 47 ವರ್ಷಗಳ ಬಳಿಕ ಕ್ಯಾಲೆಂಡರ್ ವರ್ಷದ ಎಲ್ಲ ಗ್ರಾನ್‌ಸ್ಲಾಮ್ ಪ್ರಶಸ್ತಿಗಳನ್ನು ಜಯಿಸಿದ ಆಟಗಾರನಾಗುವತ್ತ ಚಿತ್ತವಿರಿಸಿದ್ದಾರೆ.

29ರ ಹರೆಯದ ವಿಶ್ವದ ನಂ.1 ಆಟಗಾರ ಜೊಕೊವಿಕ್ 2011, 2014 ಹಾಗೂ 2015ರಲ್ಲಿ ವಿಂಬಲ್ಡನ್ ಚಾಂಪಿಯನ್ ಆಗಿದ್ದಾರೆ.

ಇತ್ತೀಚೆಗೆ ಪ್ಯಾರಿಸ್‌ನಲ್ಲಿ ಬ್ರಿಟನ್‌ನ ಆ್ಯಂಡಿ ಮರ್ರೆಯನ್ನು ಮಣಿಸಿದ್ದ ಜೊಕೊವಿಕ್ 12ನೆ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದರು. ನಡಾಲ್(14) ಹಾಗೂ ರೋಜರ್ ಫೆಡರರ್(17) ಗ್ರಾನ್‌ಸ್ಲಾಮ್ ದಾಖಲೆ ಮುರಿಯುವತ್ತ ಜೊಕೊವಿಕ್ ಹೆಜ್ಜೆ ಇಟ್ಟಿದ್ದಾರೆ.

 ನಡಾಲ್ ಗಾಯದ ಸಮಸ್ಯೆಯಿಂದಾಗಿ ಈವರ್ಷದ ವಿಂಬಲ್ಡನ್‌ನಲ್ಲಿ ಆಡುತ್ತಿಲ್ಲ. ಏಳು ಬಾರಿಯ ಆಲ್ ಇಂಗ್ಲೆಂಡ್ ಕ್ಲಬ್ ಚಾಂಪಿಯನ್ ಫೆಡರರ್ ಕಳೆದ 4 ವರ್ಷಗಳಿಂದ ಪ್ರಮುಖ ಪ್ರಶಸ್ತಿ ಜಯಿಸಿಲ್ಲ.

2013ರಲ್ಲಿ ವಿಂಬಲ್ಡನ್ ಚಾಂಪಿಯನ್ ಆಗಿರುವ ಮರ್ರೆ ಈ ವರ್ಷದ ಟೂರ್ನಿಯಲ್ಲಿ ಜೊಕೊವಿಕ್‌ಗೆ ಸವಾಲಾಗಬಲ್ಲ ಏಕೈಕ ಆಟಗಾರ. ಆದರೆ, ಬ್ರಿಟನ್‌ನ ಮರ್ರೆ, ಸರ್ಬಿಯದ ಜೊಕೊವಿಕ್ ವಿರುದ್ಧ 10-24 ಗೆಲುವು-ಸೋಲು ದಾಖಲೆ ಹೊಂದಿದ್ದಾರೆ.

ಜೊಕೊವಿಕ್ ಕಳೆದ 15 ಪಂದ್ಯಗಳ ಪೈಕಿ 13ರಲ್ಲಿ ಜಯ ಸಾಧಿಸಿದ್ದು, ಮೂರು ವರ್ಷಗಳ ಹಿಂದೆ ವಿಂಬಲ್ಡನ್ ಫೈನಲ್‌ನಲ್ಲಿ ಮರ್ರೆಗೆ ಶರಣಾಗಿದ್ದರು.

ಜೊಕೊವಿಕ್ ಪ್ರಸ್ತುತ ಎಲ್ಲ ನಾಲ್ಕು ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದಾರೆ. 1969ರ ಬಳಿಕ ಕ್ಯಾಲೆಂಡರ್ ಗ್ರಾನ್‌ಸ್ಲಾಮ್ ಜಯಿಸಿದ ಮೊದಲ ಆಟಗಾರನಾಗುವ ವಿಶ್ವಾಸದಲ್ಲಿದ್ದಾರೆ. ರಾಡ್ ಲೇವರ್ ಟೆನಿಸ್ ಇತಿಹಾಸದಲ್ಲಿ ಮೂರು ಬಾರಿ ಈ ಸಾಧನೆ ಮಾಡಿದ್ದರು.

ಜೊಕೊವಿಕ್ 2009ರ ಫ್ರೆಂಚ್ ಓಪನ್ ನಂತರ ಆಡಿದ್ದ ಎಲ್ಲ ಟೂರ್ನಿಗಳಲ್ಲಿ ಕನಿಷ್ಠ ಕ್ವಾರ್ಟರ್‌ಫೈನಲ್ ತನಕ ತಲುಪಿದ್ದಾರೆ. 1992ರ ಜಿಮ್ಮಿ ಕೊರಿಯರ್ ಬಳಿಕ ಆಸ್ಟ್ರೇಲಿಯನ್ ಹಾಗೂ ಫ್ರೆಂಚ್ ಓಪನ್ ಸತತ ಪಂದ್ಯಗಳಲ್ಲಿ ಜಯಿಸಿದ ಮೊದಲ ಟೆನಿಸ್ ಪಟು ಜೊಕೊವಿಕ್.

 ವಯಸ್ಸಿನಲ್ಲಿ ಜೊಕೊವಿಕ್‌ಗಿಂತ ಒಂದು ವಾರ ಹಿರಿಯರಾದ ಮರ್ರೆ ಮೂರನೆ ಮುಖ್ಯ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. 2012ರ ಯುಎಸ್ ಓಪನ್ ಹಾಗೂ 2013ರ ವಿಂಬಲ್ಡನ್ ಟ್ರೋಫಿಗಳನ್ನು ಮರ್ರೆ ಜಯಿಸಿದ್ದರು.

ಮರ್ರೆ ಕಳೆದ ಎರಡು ಬಾರಿ ವಿಂಬಲ್ಡನ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್ ಹಾಗೂ ಸೆಮಿಫೈನಲ್‌ನಲ್ಲಿ ಸೋತು ನಿರಾಸೆ ಮೂಡಿಸಿದ್ದರು. 2014ರಲ್ಲಿ ಕ್ವಾರ್ಟರ್‌ಫೈನಲ್‌ನಲ್ಲಿ ಗ್ರಿಗೊರ್ ಡಿಮಿಟ್ರೊವ್ ವಿರುದ್ಧ, 2015ರಲ್ಲಿ ಫೆಡರರ್ ವಿರುದ್ಧ ಮರ್ರೆ ಶರಣಾಗಿದ್ದರು.

ಈ ವರ್ಷದ ವಿಂಬಲ್ಡನ್‌ನಲ್ಲಿ ತಮ್ಮದೇ ದೇಶದ ಲಿಯಾಮ್ ಬ್ರಾಡಿ ವಿರುದ್ಧ ಮೊದಲ ಪಂದ್ಯವನ್ನು ಆಡಲಿದ್ದಾರೆ. 15 ವರ್ಷಗಳ ಹಿಂದೆ ವಿಂಬಲ್ಡನ್‌ನ ನಾಲ್ಕನೆ ಸುತ್ತಿನಲ್ಲಿ ಪೀಟ್ ಸಾಂಪ್ರಸ್‌ರನ್ನು ಮಣಿಸಿದ ಫೆಡರರ್ ವಿಶ್ವದ ಗಮನ ಸೆಳೆದಿದ್ದರು.

2003ರಲ್ಲಿ ಸ್ವಿಸ್ ಸ್ಟಾರ್ ವಿಂಬಲ್ಡನ್‌ನಲ್ಲಿ ಮೊದಲ ಪ್ರಶಸ್ತಿ ಜಯಿಸಿದ್ದರು. 2012ರಲ್ಲಿ ಏಳನೆ ಬಾರಿ ಪ್ರಶಸ್ತಿ ಜಯಿಸಿದ್ದರು. ಕಳೆದ ಎರಡು ವರ್ಷ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದ ಫೆಡರರ್ ರನ್ನರ್‌ಅಪ್‌ಗೆ ತೃಪ್ತಿಪಟ್ಟುಕೊಂಡಿದ್ದಾರೆ. 34ರ ಹರೆಯದ ಫೆಡರರ್ ಪ್ರಸ್ತುತ ಕಳಪೆ ಫಾರ್ಮ್ ಹಾಗೂ ಫಿಟ್‌ನೆಸ್ ಸಮಸ್ಯೆ ಎದುರಿಸುತ್ತಿದ್ದಾರೆ. ಫೆಡರರ್ ಗಾಯದ ಸಮಸ್ಯೆಯ ಕಾರಣ ಫ್ರೆಂಚ್ ಓಪನ್‌ನಿಂದ ಹಿಂದೆ ಸರಿದಿದ್ದರು.

ಒಂದು ವೇಳೆ ಫೆಡರರ್ ವಿಂಬಲ್ಡನ್ ಪ್ರಶಸ್ತಿ ಜಯಿಸಿದರೆ, 1975ರ ಬಳಿಕ ಪ್ರಶಸ್ತಿ ಜಯಿಸಿದ ಹಿರಿಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಫೆಡರರ್ ಮೊದಲ ಸುತ್ತಿನ ಪಂದ್ಯದಲ್ಲಿ ಅರ್ಜೆಂಟೀನದ ಗುಡೊ ಪೆಲ್ಲಾರನ್ನು ಎದುರಿಸಲಿದ್ದಾರೆ.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X