ತುಂಬೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
ತುಂಬೆ, ಜೂ.26: ತುಂಬೆ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ತುಂಬೆ ಪಪೂ ಕಾಲೇಜಿನ ಉಪನ್ಯಾಸಕ, ಸಾಹಿತಿ ವಿ. ಎಸ್. ಭಟ್ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ ಕೆದಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಗಂಗಾಧರ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಸಂಸತ್ತಿನ ಸಹ ನಿರ್ದೇಶಕ ಹಸೈನಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಹನಾ ಕಾರ್ಯಕ್ರಮ ನಿರೂಪಿಸಿದರು. ಮುದಸ್ಸಿರ ವಂದಿಸಿದರು.
Next Story





