Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿವೈಎಫ್‌ಐ ವತಿಯಿಂದ ರಕ್ತದಾನ ಶಿಬಿರ,...

ಡಿವೈಎಫ್‌ಐ ವತಿಯಿಂದ ರಕ್ತದಾನ ಶಿಬಿರ, ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ27 Jun 2016 3:56 PM IST
share
ಡಿವೈಎಫ್‌ಐ ವತಿಯಿಂದ ರಕ್ತದಾನ ಶಿಬಿರ, ಪ್ರಶಸ್ತಿ ಪ್ರದಾನ

ಮಂಗಳೂರು, ಜೂ.27: ಡಿವೈಎಫ್‌ಐ ನಾಯಕ ಶ್ರೀನಿವಾಸ್ ಬಜಾಲ್‌ರ 14ನೆ ವರ್ಷದ ಹುತಾತ್ಮ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ಬಜಾಲ್ ಸಂತ ಜೋಸೆಫರ ಫ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯ ಎನ್.ಉದಯಕಿರಣ್, ಜಿಲ್ಲೆಯಲ್ಲಿ ಬಲಿಷ್ಠ ಯುವಜನರ ಪಡೆಯನ್ನು ಹೊಂದಿರುವಂತಹ ಸಂಘಟನೆ ಸಮಾಜದಲ್ಲಿರುವ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದರ ಜೊತೆಗೆ ಕಳೆದ 14 ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ನಡೆಸುವ ಮೂಲಕ ಅಗತ್ಯವಿರುವ ರೋಗಿಗಳಿಗೆ ರಕ್ತ ಪೂರೈಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಮುಖಂಡ ಜೆ.ಬಾಲಕೃಷ್ಣ ಶೆಟ್ಟಿ, ಇವತ್ತು ಜಿಲ್ಲೆಯ ಸೌಹರ್ದತೆಯನ್ನು ಹಾಳುಗೆಡವುವಂತಹ ಕೋಮುವಾದಿ ಶಕ್ತಿಗಳು ಯುವಜನತೆಯನ್ನು ಅವರ ನೈಜ ಸಮಸ್ಯೆಗಳ ಆಧಾರದಲ್ಲಿ ಸಂಘಟಿಸುವ ಬದಲು ಅವರ ಮನಸ್ಸಲ್ಲಿ ಕೋಮುದ್ವೇಷವನ್ನು ಹರಡಿಸಿ ಸಮಾಜವನ್ನು ಒಡೆಯುವಂತಹ ಕೃತ್ಯಗಳಲ್ಲಿ ತೊಡಗಿಸುವ ಮೂಲಕ ಈ ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ತರುವಂತಹ ಮತ್ತು ಮುಗ್ಧ ಯುವಜನರನ್ನು ಜೈಲುಪಾಲು ಮಾಡುವ ಮೂಲಕ ಅವರನ್ನು ಕ್ರಿಮಿನಲ್‌ಗಳನ್ನಾಗಿ ಪರಿವರ್ತಿಸುವ ಕೆಲಸಗಳಲ್ಲಿ ತೊಡಗಿದೆ. ಶ್ರೀನಿವಾಸ್‌ರನ್ನು ಕೊಂದಂತಹ ಹಂತಕರು ಸುಪರಿ ಕಿಲ್ಲರ್‌ಗಳು ಜಿಲ್ಲೆಯಲ್ಲಿ ಹಲವು ಹತ್ಯೆಗಳನ್ನು ನಡೆಸಿ ಜೈಲುಪಾಲಾಗಿರುವುದನ್ನು ಕಂಡಿದ್ದೇವೆ. ಆದ್ದರಿಂದ ಯುವಜನರು ಈ ಕೋಮುವಾದಿಗಳನ್ನು ಸಮಾಜದಿಂದ ಪ್ರತ್ಯೇಕಿಸಿ ನವಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವೈಎಫ್‌ಐ ಬಜಾಲ್ ಘಟಕದ ಮಾಜಿ ಮುಖಂ ಸುರೇಶ್ ಬಜಾಲ್ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೆ.ಎಂ.ಸಿ ಆಸ್ಪತ್ರೆಯ ವೈದ್ಯೆ ಡಾ. ಸೋನಾಲಿ, ಡಿವೈಎಫ್‌ಐ ಸ್ಥಳೀಯ ಮುಖಂಡರಾದ ಆಶೋಕ್ ಸಾಲ್ಯಾನ್, ವರಪ್ರಸಾದ್ ಉಪಸ್ಥಿತರಿದ್ದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಾಸ್ತಾವಿಕ ಭಾಷಣ ಮಾಡಿದರು. ಧೀರಜ್ ಪಕ್ಕಲಡ್ಕ ಸ್ವಾಗತಿಸಿ ಪ್ರಜ್ವಲ್ ವಂದಿಸಿದರು.ಡಿವೈಎಫ್‌ಐ ಬಜಾಲ್ ಘಟಕದ ಕಾರ್ಯದರ್ಶಿ ರಿತೇಶ್ ಪಕ್ಕಲಡ್ಕ ನಿರೂಪಿಸಿದರು. ರಕ್ತದಾನ ಶಿಬಿರವನ್ನು ಕೆಎಂಸಿ ರಕ್ತನಿಧಿ ಸಂಸ್ಥೆಯ ಆಶ್ರಯದಲ್ಲಿ ನಡೆಸಲಾಯಿತು. ಶಿಬಿರದಲ್ಲಿ 50ಕ್ಕೂ ಮಿಕ್ಕಿ ಡಿವೈಎಫ್‌ಐ ಕಾರ್ಯಕರ್ತರು ರಕ್ತದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X