ಸ್ಪೀಕರ್ ಸ್ಥಾನಕ್ಕೆ ಜು.5ಕ್ಕೆ ಚುನಾವಣೆ

ಬೆಂಗಳೂರು, ಜೂ. 27: ಸಚಿವ ಸಂಪುಟಕ್ಕೆ ಸೇರ್ಪಡೆ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಜು.5ರಂದು ಚುನಾವಣಾ ದಿನಾಂಕವನ್ನು ಪ್ರಕಟಿಸಲಾಗಿದೆ.
ಜೂ.28ರಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜು.4ರ ಮಧ್ಯಾಹ್ನ 12ಕ್ಕೆ ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲಿದೆ. ಆ ಬಳಿಕ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ.
ಸ್ವೀಕರ್ ಸ್ಥಾನಕ್ಕೆ ಹಿರಿಯ ಶಾಸಕ ಕೆ.ಬಿ.ಕೋಳಿವಾಡ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಸ್ತಾಪಿಸಿದ್ದು, ಅವರನ್ನೇ ಒಮ್ಮತದಿಂದ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಜು.4ರಂದು ಅಧಿವೇಶನ ಆರಂಭವಾಗಲಿದ್ದು, ಸಂತಾಪ ಸೂಚನೆ ಬಳಿಕ ಕಲಾಪ ಮುಂದೂಡಲಾಗುತ್ತದೆ. ಉಪ ಸಭಾಧ್ಯಕ್ಷ ಎನ್.ಎಚ್. ಶಿವಶಂಕರ ರೆಡ್ಡಿ, ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.
Next Story





