Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲಾ ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ:...

ಶಾಲಾ ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ: ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ27 Jun 2016 9:50 PM IST
share
ಶಾಲಾ ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ: ಜೆ.ಆರ್.ಲೋಬೊ

ಮಂಗಳೂರು,ಜೂ.27:ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಶಾಲಾ ಮಕ್ಕಳ ಸಾಗಾಟದ ಬಗ್ಗೆ ವಾಹನ ಚಾಲಕ, ಮಾಲಕರ ಸಭೆಯಲ್ಲಿ ಶಾಸಕ ಜೆ.ಆರ್.ಲೋಬೊ ಕರೆ ನೀಡಿದರು.

ಅವರು ಇಂದು ನಗರದ ರೋಶನಿ ನಿಲಯ ಸಭಾಂಗಣದಲ್ಲಿ ನಡೆದ ಶಾಲಾ ಮಕ್ಕಳ ವಾಹನ ಚಾಲಕ, ಮಾಲಕರು, ಶಾಲಾಡಳಿತ ಮಂಡಳಿ ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಎಲ್ಲವನ್ನು ಸುತ್ತೋಲೆ, ಕಾನೂನಿನ ಮೂಲಕವೇ ಬದಲಾಯಿಸಲು ಸಾಧ್ಯವಿಲ್ಲ. ಪೋಷಕರ, ಚಾಲಕರ ಶಾಲಾಡಳಿತ ಮಂಡಳಿಯ ಸದಸ್ಯರು ಎಲ್ಲರ ಸಹಕಾರದಿಂದ ಮಕ್ಕಳ ಸುರಕ್ಷತೆಯ ಬಗ್ಗೆ ಕಾನೂನಿನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಮಾನವೀಯ ನೆಲೆಯಲ್ಲಿ ಕೆಲವೊಮ್ಮೆ ಮಕ್ಕಳ ವಾಹನಗಳಿಗೆ ವಿನಾಯಿತಿ ದೊರೆತರೂ ಮಕ್ಕಳ ಹಿತದೃಷ್ಟಿಯಿಂದ ಈ ಅವಕಾಶ ನೀಡಲಾಗಿದೆ ಹೊರತು, ಅದರಿಂದ ಮಕ್ಕಳ ಬದುಕಿಗೆ ತೊಂದರೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾದಾಗ ಅನಿವಾರ್ಯವಾಗಿ ಕಾನೂನಿನ ನಿಯಂತ್ರಣ ಬೇಕಾಗುತ್ತದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.

ನಗರದಲ್ಲಿ ಶಾಲಾ ವಾಹನಗಳ ಭರಾಟೆ ತಗ್ಗಿಸಲು ಶಾಲಾ ಸಮಯವನ್ನು ವ್ಯತ್ಯಾಸಗೊಳಿಸುವುದು ಉತ್ತಮ ಎಂದು ಮೇಯರ್ ಹರಿನಾಥ್ ಸಲಹೆ ನೀಡಿದರು.ಒಂದೆ ಸಮಯದಲ್ಲಿ ಶಾಲೆಗಳು ಆರಂಭಗೊಂಡಾಗ ಮತ್ತು ಬಿಡುವಾಗ ಹೆಚ್ಚಿನ ಒತ್ತಡ ಉಂಟಾಗುತ್ತದೆ.ಈ ರೀತಿಯ ವಾಹನದಟ್ಟಣೆಯಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಕಡೆ ಬೆಳಗಿನ ಜಾವ ಬೇಗನೆ ಶಾಲೆ ಆರಂಭಗೊಂಡಾಗ ಅವಸರವಾಗಿ ಮಕ್ಕಳನ್ನು ಸಾಗಿಸುವುದರಿಂದಲೂ ಅಪಘಾತ ಹೆಚ್ಚಾಗುವ ಸಾಧ್ಯತೆ ಈ ಬಗ್ಗೆ ಗಮನ ಹರಿಸಬೇಕಾಗಿದೆ. ನಗರದ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೂ ವೇಗದ ಮಿತಿಯನ್ನು ಕಡ್ಡಾಯಗೊಳಿಸಬೇಕು ಎಂದು ಮೇಯರ್ ಹರಿನಾಥ್ ತಿಳಿಸಿದರು.

ಸಂಚಾರ ನಿಯಮದ ಪಾಲನೆಯನ್ನು ಮುರಿಯುವುದರಿಂದ ಅಪಘಾತ ಹೆಚ್ಚುತ್ತಿದೆ

ಬಹುತೇಕ ಅಪಘಾತಗಳ ಸಂಚಾರ ನಿಯಮವನ್ನು ಸರಿಯಾಗಿ ಪಾಲಿಸದೆ ಇರುವುದರಿಂದಲೇ ನಡೆಯುತ್ತಿರುವುದು ಕಂಡು ಬಂದಿದೆ. ವೇಗದ ಮಿತಿಯನ್ನು ಕಡಿತಗೊಳಿಸಿದಾಗ ಅಪಘಾತದ ಪ್ರಮಾಣ ಕಡಿಮೆಯಾಗುತ್ತದೆ ಎಂದು ಪ್ರಭಾರ ಆರ್‌ಟಿಒ ಜಿ.ಎಸ್.ಹೆಗ್ಡೆ ತಿಳಿಸಿದರು.

30ರಿಂದ 40 ಕಿಲೋಮೀಟರ್ ವೇಗದಲ್ಲಿ ಸಾಗುವ ವಾಹನಗಳು ಅಪಘಾತಕ್ಕೆ ಈಡಾಗುವ ಸಂಭವ ಕಡಿಮೆ ಇರುತ್ತದೆ. ಶಾಲಾಡಳಿತ ಮಂಡಳಿಗಳು ತಮ್ಮ ಶಾಲೆಗಳಿಗೆ ಮಕ್ಕಳ ಸಾಗಾಟಕ್ಕೆ ತಮ್ಮ ಶಾಲೆಯ ವತಿಯಿಂದಲೇ ವಾಹನ ಬಳಸುವುದು. ಈ ವಾಹನಕ್ಕೆ ಜಿಪಿಎಸ್ ಅಳವಡಿಸಿದಾಗ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇನ್ನಷ್ಟು ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಯಾವುದೇ ಖಾಸಗಿ ಬಸ್‌ಗಳಿಗೆ ಪರವಾನಿಗೆ ನೀಡಲಾಗುವುದಿಲ್ಲ ಕೆಎಸ್ಸಾರ್ಟಿಸಿ ಬಸ್ಸುಗಳು ನಗರದಲ್ಲಿ ಸಂಚರಿಸಲಿದೆ. ಇದರಿಂದ ಶಾಲಾ ಮಕ್ಕಳ ಸಾಗಾಟದ ಸಮಸ್ಯೆ ಬಗೆಹರಿಯಲಿದೆ ಎಂದು ಜಿ.ಎಸ್.ಹೆಗ್ಡೆ ತಿಳಿಸಿದರು.

ಸ್ಕೂಲ್ ಕ್ಯಾಬ್‌ಗಳ ಮೂಲಕ ಶಾಲಾ ಮಕ್ಕಳ ಸಾಗಾಟ ಮಾಡುವುದು ಸೂಕ್ತ. ಈ ರೀತಿಯ ವಾಹನ ಖರೀದಿಗೂ ಸರಕಾರ ತೆರಿಗೆ ವಿನಾಯಿತಿ ನೀಡುತ್ತಿದೆ. ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳಿಗೆ ಹಳದಿ ಬಣ್ಣ ಬಳಿಯುವುದು ಕಡ್ಡಾಯವಾಗಿದೆ ಎಂದು ಜಿ.ಎಸ್.ಹೆಗ್ಡೆ ತಿಳಿಸಿದರು.

ಸಮಾರಂಭದಲ್ಲಿ ಎಸಿಪಿ ಉದಯ ನಾಯಕ್ ಶಾಲಾ ಮಕ್ಕಳು ದುರಂತಕ್ಕೀಡಾಗುವುದನ್ನು ತಪ್ಪಿಸಲು ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳಿಂದ ಕೆಲವರಿಗೆ ತೊಂದರೆಯಾದರೂ ಅನಿವಾರ್ಯವಾಗಿದೆ ಎಂದರು.

ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್, ರಾಜಲಕ್ಷ್ಮೀ, ಟ್ರಾಫಿಕ್ ಇನ್ಸ್‌ಪೆಕ್ಟರ್‌ಗಳಾದ ಮೋಹನ್ ಪೂಜಾರಿ, ಸುರೇಶ್, ದ.ಕ ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ನೆಲ್ಸನ್ ಪಿರೇರಾ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾಂಗ್ರೆಸ್ ಮುಖಂಡ ಪಿ.ವಿ.ಮೋಹನ್, ಟಿ.ಕೆ.ಸುಧೀರ್, ಸಿಪಿಐ ಮುಖಂಡ ಸುನಿಲ್ ಕುಮಾರ್ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X