ಲಾರಿ ಅವಘಡ: ತಪ್ಪಿದ ಅನಾಹುತ

ಮಡಿಕೇರಿ, ಜೂ.28 : ಕಲ್ಲಂಗಡಿ ಹಣ್ಣು ತುಂಬಿದ ಲಾರಿಯೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಮಗುಚಿಕೊಂಡ ಘಟನೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ.
ಹುಣುಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಢಿಕ್ಕಿಯಾಗಿ ರಸ್ತೆಗೆ ಮಗುಚಿಕೊಂಡಿತು. ಆದರೆ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಹಾನಿಯಾಗಿಲ್ಲ. ಭಾರೀ ಮಳೆ ಮತ್ತು ಮಂಜು ಕವಿದ ವಾತಾವರಣವಿದ್ದ ಕಾರಣ ಈ ಅವಘಡ ಸಂಭವಿಸಿದೆ. ಘಟನೆಯಿಂದ ಕೆಲವು ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಮಡಿಕೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





