Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುತ್ರನ ಶವವಿಟ್ಟು ಆ್ಯಂಬುಲೆನ್ಸ್‌ನಲ್ಲೇ...

ಪುತ್ರನ ಶವವಿಟ್ಟು ಆ್ಯಂಬುಲೆನ್ಸ್‌ನಲ್ಲೇ ರಾತ್ರಿ ಕಳೆದ ತಾಯಿ

ಕಲ್ಲು ಹೃದಯದ ಪತಿ, ಮಾನವೀಯತೆ ಮರೆತ ಮನೆ ಮಾಲಕ

ವಾರ್ತಾಭಾರತಿವಾರ್ತಾಭಾರತಿ28 Jun 2016 11:30 PM IST
share
ಪುತ್ರನ ಶವವಿಟ್ಟು ಆ್ಯಂಬುಲೆನ್ಸ್‌ನಲ್ಲೇ ರಾತ್ರಿ ಕಳೆದ ತಾಯಿ

ಮಡಿಕೇರಿ, ಜೂ.28 : ಕಲ್ಲು ಹೃದಯದ ಪತಿ ಹಾಗೂ ಮಾನವೀಯತೆ ಮರೆತ ಮನೆ ಮಾಲಕನಿಂದಾಗಿ ಪುತ್ರನ ಶವವನ್ನು ರಾತ್ರಿ ಪೂರ್ತಿ ಆ್ಯಂಬುಲೆನ್ಸ್‌ನಲ್ಲಿಟ್ಟು ತಾಯಿಯೊಬ್ಬಳು ಕಣ್ಣೀರಿಟ್ಟ ಹೃದಯ ವಿದ್ರಾವಕ ಪ್ರಕರಣ ನಗರದಲ್ಲಿ ನಡೆದಿದೆ.

ಲೋಹಿತ್(22) ಎಂಬಾತ ತಾನು ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಬಸ್‌ನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ನಿರ್ವಾಹಕನ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾಯಿ ಹಾಗೂ ಸಹೋದರಿ ಸಾರ್ವಜನಿಕರ ಮೊರೆ ಹೋಗಬೇಕಾದ ವಿಲಕ್ಷಣ ಪ್ರಸಂಗ ನಡೆಯಿತು. ಖಾಸಗಿ ಬಸ್‌ನಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ಲೋಹಿತ್‌ಎಂಬಾತ ಸೋಮವಾರ ತಾಳತ್‌ಮನೆಯಲ್ಲಿ ಬಸ್‌ನಿಂದ ಬಿದ್ದು ಮೃತಪಟ್ಟಿದ್ದ. ಈತನ ಮೃತದೇಹದ ಮರಣೋತ್ತರ ಪರೀಕ್ಷೆ ರಾತ್ರಿ 11 ಗಂಟೆ ವೇಳೆಗೆ ಪೂರ್ಣಗೊಂಡು ಅಂಚೆ ಕಚೇರಿ ಬಳಿ ಇರುವ ಬಾಡಿಗೆ ಮನೆಗೆ ಮೃತ ದೇಹವ್ನು ತರಲಾಯಿತು. ಆದರೆ ಮನೆಯ ಮಾಲಕ ಮೃತದೇಹದ ಪ್ರವೇಶಕ್ಕೆ ನಿರಾಕರಿಸಿದರು. ದಾರಿ ಕಾಣದಾದ ಲೋಹಿತನ ತಾಯಿ ಸುನಿತಾ ಹೆಬ್ಬಾಲೆ ಮನೆಯಲ್ಲಿದ್ದ ಪತಿಗೆ ವಿಷಯ ತಿಳಿಸಿದಾಗ ಹಣವಿದ್ದರೆ ಮಾತ್ರ ಮೃತದೇಹವನ್ನು ತಂದು ಅಂತ್ಯ ಸಂಸ್ಕಾರ ಮಾಡುವಂತೆ ಕಟ್ಟುನಿಟ್ಟಾಗಿ ಹೇಳಿದ್ದ ಎನ್ನಲಾಗಿದ್ದು, ಪರಿಣಾಮ ತಾಯಿ ಹಾಗೂ ಸಹೋದರಿ ಅಸಹಾಯಕರಾದರು.

ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ತಾಯಿ ಮತ್ತು ಸಹೋದರಿ ರಾತ್ರಿ ಪೂರ್ತಿ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿಟ್ಟುಕೊಂಡು ಕಣ್ಣೀರಿಡುತ್ತಾ ಕುಳಿತುಕೊಳ್ಳಬೇಕಾದ ದುಸ್ಥಿತಿ ಎದುರಾಯಿತು. ೆಳಗ್ಗೆ ಕೆಲವು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಮನೆ ಮಾಲಕನ ಮನ ವೊಲಿಸಿ ಸ್ವಲ್ಪಸಮಯದವರೆಗೆ ಮೃತ ದೇಹವನ್ನು ಮನೆಯಲ್ಲಿಡಲು ವ್ಯವಸ್ಥೆ ಮಾಡಿದರು. ನಂತರ ಬಸ್ ಮಾಲಕರು ಹಾಗೂ ಸಾರ್ವಜನಿಕರ ಸಹಕಾರದಿಂದ ಲೋಹಿತನ ಮೃತದೇಹದ ಅಂತ್ಯ ಸಂಸ್ಕಾರ ನಡೆಸಲಾಯಿತು.

ನಾಲ್ಕು ವರ್ಷಗಳ ಹಿಂದೆ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಹೆಬ್ಬಾಲೆಯಲ್ಲಿ ನೆಲೆಸಿದ್ದ ಕಲ್ಲು ಹೃದಯದ ಪತಿ ಹಾಗೂ ಮಾನವೀಯತೆ ಮರೆತ ಮನೆ ಮಾಲಕನ ವರ್ತನೆಯಿಂದ ಮೃತ ಲೋಹಿತನ ತಾಯಿ ಹಾಗೂ ಸಹೋದರಿ ಅಸಹಾಯಕತೆಯಿಂದ ರೋದಿಸುತ್ತಿದ್ದ ದೃಶ್ಯ ಹೃದಯ ಕಲಕುವಂತ್ತಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X