Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚಾಯತ್ ರಾಜ್ ಬಲವರ್ಧನೆಗೆ ಕೇಂದ್ರ...

ಪಂಚಾಯತ್ ರಾಜ್ ಬಲವರ್ಧನೆಗೆ ಕೇಂದ್ರ ಅನುದಾನ ನೀಡಬೇಕು: ಎಚ್.ಕೆ.ಪಾಟೀಲ್

ಪಂಚಾಯತ್ ರಾಜ್’ ಸಚಿವರ ಸಮ್ಮೇಳನದಲ್ಲಿ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 Jun 2016 11:35 PM IST
share
ಪಂಚಾಯತ್ ರಾಜ್ ಬಲವರ್ಧನೆಗೆ ಕೇಂದ್ರ ಅನುದಾನ ನೀಡಬೇಕು: ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.28: ರಾಷ್ಟ್ರದ ಪ್ರಜಾಸತ್ತೆಗೆ ಮೂಲಭೂತ ಅಡಿಪಾಯ ಒದಗಿಸುವ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಬಲಗೊಳಿಸಲು ಕೇಂದ್ರ ಸರಕಾರ ಹೆಚ್ಚುವರಿ ಹಣಕಾಸು ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.
ಮಂಗಳವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ‘ಪಂಚಾಯತ್ ರಾಜ್ ಸಚಿವರ ಸಮ್ಮೇಳನ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರಿಕರಣ ದಂತಹ ಕ್ರಾಂತಿಕಾರಿ ಕಾನೂನನ್ನು ಜಾರಿಗೆ ತಂದ ಕೀರ್ತಿ ಕರ್ನಾಟಕದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಪಂಚಾಯತ್‌ಗಳಿಗೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಅಧಿಕಾರಗಳನ್ನು ನೀಡುವ ನಿಟ್ಟಿನಲ್ಲಿ ಹೊಸ ಸ್ವರೂಪದ ಗ್ರಾಮ ಸ್ವರಾಜ್ ಕಾಯ್ದೆಯನ್ನು ಅನುಷ್ಠಾನಗೊಳಿಸಿದೆ. ರಾಷ್ಟ್ರದಲ್ಲಿಯೇ ಮೊಟ್ಟಮೊದಲ ಬಾರಿಗೆ ಪಂಚಾಯತ್ ಆಡಳಿತದಲ್ಲಿ ಪಂಚಾಯತ್ ನೀತಿಯ ನಿರ್ದೇಶನಾ ತತ್ವಗಳು ಜಾರಿಗೆ ತಂದಿದ್ದು, ಪಂಚಾಯತ್ ಸದಸ್ಯರು ಮತ್ತು ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹೊಣೆಗಾರಿಕೆ ಮತ್ತು ಕರ್ತವ್ಯಗಳನ್ನು ಪಟ್ಟಿ ಮಾಡಿದ ಮೊಟ್ಟಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ರ್ನಾಟಕ ರಾಜ್ಯವು 14ನೆ ಹಣಕಾಸು ಆಯೋಗದ ಅನುದಾನವನ್ನು ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಆಧಾರದ ಮೇಲೆ 90:10 ಅನುಪಾತದಲ್ಲಿ ಗ್ರಾಮ ಪಂಚಾಯತ್‌ಗಳಿಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಕುಡಿಯುವ ನೀರು ಮತ್ತು ನೈರ್ಮಲ್ಯದ ವಿಷಯಗಳನ್ನು ಆದ್ಯತಾ ವಲಯವೆಂದು ಪರಿಗಣಿಸಲಾಗಿದೆ. ರಸ್ತೆಗಳು, ಒಳಚರಂಡಿ, ಬೀದಿ ದೀಪ ಮತ್ತು ಸ್ಮಶಾನಗಳ ಅಭಿವೃದ್ಧಿ ಮುಂತಾದವುಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ವಿಶ್ವವಿದ್ಯಾನಿಲಯವು ಇದೇ ಶೈಕ್ಷಣಿಕ ವರ್ಷದಿಂದ ಗದಗ ನಗರದಲ್ಲಿ ಪ್ರಾರಂಭವಾಗುತ್ತಿದೆ. ಗ್ರಾಮೀಣಾಭಿವೃದ್ಧಿ ವಿಷಯಗಳ ಅಧ್ಯಯನಕ್ಕೆ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಸಚಿವರು ಹೆಮ್ಮೆ ಪಟ್ಟರು. ಹೊಸ ಸ್ವರೂಪದ ಶಾಸನದ ಮೂಲಕ ಗ್ರಾಮೀಣ ಜನರನ್ನು ಅಧಿಕಾರಯುಕ್ತರನ್ನಾಗಿ ಮಾಡುವುದು. ಮತ್ತು ಧ್ವನಿಯಿಲ್ಲದ ಸಣ್ಣ ಸಣ್ಣ ಜನವಸತಿಗಳ ಗ್ರಾಮೀಣರಿಗೂ ಜನವಸತಿ ಸಭೆಯ ಹೊಸ ಪ್ರಯೋಗ ಮಾಡುವ ಮೂಲಕ ಹೆಚ್ಚಿನ ಶಕ್ತಿ ತುಂಬಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X