ಕಾರವಾರ: ನಿಷೇಧಿತ ಪ್ರದೇಶದಲ್ಲಿ ಮೀನುಗಾರಿಕೆ - 12 ಮಂದಿ ಸೆರೆ

ಕಾರವಾರ, ಜೂ.29: ನೌಕಾನೆಲೆ ಪ್ರದೇಶದಲ್ಲಿ ಅನಧಿಕೃತ ಪ್ರವೇಶ ಮಾಡಿದ ಕಾರಣ ಸ್ಥಳೀಯ ಮೀನುಗಾರರನ್ನು ನೌಕಾನೆಲೆ ಪೊಲೀಸರು ಬಂಧಿಸಿದ್ದಾರೆ. ಮೀನುಗಾರರಿಂದ ದೋಣಿ ಹಾಗೂ ಮೀನುಗಾರಿಕಾ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ನೌಕಾನೆಲೆ ವ್ಯಾಪ್ತಿಯ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದ್ದು ಇಲ್ಲಿ ತೆರಳಿದ ಕಾರಣ ಸ್ಥಳೀಯ ಮೀನುಗಾರರನ್ನು ಬಂಧಿಸಲಾಗಿದೆ. ಒಟ್ಟು 12 ಮೀನುಗಾರರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರಿಂದ ಮೂರು ದೋಣಿಗಳನ್ನು ಕೂಡ ವಶಕ್ಕೆ ಪಡೆದಿದ್ದಾರೆ.
ಬೆಳಗ್ಗೆಯೇ ಮೀನುಗಾರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿ ಬಂಧಿತರನ್ನು ನಿಯಮಾನುಸಾರ ಗ್ರಾಮೀಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
Next Story





