Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಣಕ್ಕಾಗಿ ಬೇಡುವುದನ್ನು ನಿಲ್ಲಿಸಿ : ...

ಹಣಕ್ಕಾಗಿ ಬೇಡುವುದನ್ನು ನಿಲ್ಲಿಸಿ : ಟ್ರಂಪ್ ಗೆ ವಿದೇಶಿ ನಾಯಕರ ಕರೆ

ವಾರ್ತಾಭಾರತಿವಾರ್ತಾಭಾರತಿ30 Jun 2016 7:52 PM IST
share
ಹಣಕ್ಕಾಗಿ ಬೇಡುವುದನ್ನು ನಿಲ್ಲಿಸಿ :  ಟ್ರಂಪ್ ಗೆ ವಿದೇಶಿ ನಾಯಕರ ಕರೆ

ವಾಶಿಂಗ್ಟನ್, ಜೂ. 30: ತನ್ನ ಚುನಾವಣಾ ಪ್ರಚಾರ ನಿಧಿಗೆ ದೇಣಿಗೆ ನೀಡುವಂತೆ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮಾಡಿರುವ ಮನವಿಯನ್ನು ಬ್ರಿಟಿಶ್ ಪಾರ್ಲಿಮೆಂಟ್‌ನ ಸದಸ್ಯರು ಮತ್ತು ಇತರ ವಿದೇಶಿ ರಾಜಕಾರಣಿಗಳು ತಿರಸ್ಕರಿಸಿದ್ದಾರೆ.

 ‘‘ಭಿಕ್ಷೆ ಬೇಡುವ ಪತ್ರಗಳನ್ನು ಸಂಸದರಿಗೆ ಕಳುಹಿಸುವುದನ್ನು ದಯವಿಟ್ಟು ನಿಲ್ಲಿಸಿ’’ ಎಂದು ಬ್ರಿಟಿಶ್ ಸಂಸತ್ತಿನ ಸದಸ್ಯ ಸ್ಟುವರ್ಟ್ ಮೆಕ್‌ಡೊನಾಲ್ಡ್ ಟ್ವೀಟ್ ಮಾಡಿದ್ದಾರೆ. ‘‘ಇದು ಕರುಣಾಜನಕವಾಗಿದೆ’’ ಎಂದಿದ್ದಾರೆ.

ಈ ಅಭ್ಯಾಸ ಕಿರಿಕಿರಿಯುಂಟು ಮಾಡುವುದು ಮಾತ್ರವಲ್ಲ, ಅಕ್ರಮ ಕೂಡ ಎಂಬುದಾಗಿ ಎರಡು ನಿಗಾ ಗುಂಪುಗಳು ಹೇಳಿವೆ.

‘‘ಇದು ಡೊನಾಲ್ಡ್ ಟ್ರಂಪ್‌ಗೆ ತಿಳಿದಿರಬೇಕಾಗಿತ್ತು’’ ಎಂದು ಕ್ಯಾಂಪೇನ್ ಲೀಗಲ್ ಸೆಂಟರ್‌ನ ಪೌಲ್ ಎಸ್. ರಯಾನ್ ಹೇಳುತ್ತಾರೆ. ಈ ಸಂಸ್ಥೆಯು ಇನ್ನೊಂದು ಕಾವಲು ಸಂಸ್ಥೆ ‘ಡೆಮಾಕ್ರಸಿ 21’ ಜೊತೆಗೆ ಸೇರಿಕೊಂಡು ಫೆಡರಲ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ನಿರ್ಧರಿಸಿದೆ.

ಅಮೆರಿಕದ ರಾಜಕೀಯ ಪ್ರಚಾರದಲ್ಲಿ ವಿದೇಶಿ ಹಣವನ್ನು ದೂರವಿರಿಸಬೇಕೆಂದು ಫೆಡರಲ್ ಚುನಾವಣಾ ಕಾನೂನು ಹೇಳುತ್ತದೆ. ನಿರ್ದಿಷ್ಟ ಅವಧಿಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಹಿಲರಿ ಕ್ಲಿಂಟನ್ ಸಂಗ್ರಹಿಸಿದ ದೇಣಿಗೆಯ 10ನೆ ಒಂದು ಭಾಗದಷ್ಟು ಹಣವನ್ನು ಟ್ರಂಪ್ ಸಂಗ್ರಹಿಸಿದ್ದಾರೆ ಎಂದು ಗೊತ್ತಾದ ಬಳಿಕ, ತನ್ನ ನಿಧಿ ಸಂಗ್ರಹ ಅಭಿಯಾನದ ವೇಗವನ್ನು ಟ್ರಂಪ್ ಹೆಚ್ಚಿಸಿದ್ದಾರೆ ಎನ್ನಲಾಗಿದೆ.

ಇದರ ಭಾಗವಾಗಿ ಟ್ರಂಪ್ ಲಕ್ಷಾಂತರ ಅಮೆರಿಕನ್ನರಿಗೆ ದೇಣಿಗೆ ಕೋರಿ ಇಮೇಲ್ ಮನವಿಗಳನ್ನು ಕಳುಹಿಸುತ್ತಿದ್ದಾರೆ. ನಿಧಿ ಸಂಗ್ರಹ ಮನವಿಗಳನ್ನು ಟ್ರಂಪ್ ವಿದೇಶಿ ರಾಜಕಾರಣಿಗಳಿಗೂ ಕಳುಹಿಸಿದ್ದಾರೆ. ಐಸ್‌ಲ್ಯಾಂಡ್, ಆಸ್ಟ್ರೇಲಿಯ, ಬ್ರಿಟನ್ ಮತ್ತು ಸ್ಕಾಟ್‌ಲ್ಯಾಂಡ್‌ನ ರಾಜಕಾರಣಿಗಳಿಗೂ ಇಂಥ ಇಮೇಲ್‌ಗಳನ್ನು ರವಾನಿಸಲಾಗಿದೆ ಎನ್ನಲಾಗಿದೆ.

ಟ್ರಂಪ್‌ರ ಪ್ರಚಾರ ಮನವಿಗಳನ್ನು ತಡೆಹಿಡಿಯುವಂತೆ ಸರ್ ರೋಜರ್ ಗೇಲ್ ಮಂಗಳವಾರ ಬ್ರಿಟಿಶ್ ಹೌಸ್ ಆಫ್ ಕಾಮನ್ಸ್‌ನ ಸ್ಪೀಕರ್‌ಗೆ ಮನವಿ ಮಾಡಿದರು.

‘‘ಡೊನಾಲ್ಡ್ ಟ್ರಂಪ್ ಎಂಬ ವ್ಯಕ್ತಿಯ ಪರವಾಗಿ ಟೀಮ್ ಟ್ರಂಪ್‌ನಿಂದ ಸಂಸತ್ ಸದಸ್ಯರಿಗೆ ಇಮೇಲ್‌ಗಳ ಸುರಿಮಳೆಯಾಗುತ್ತಿದೆ’’ ಎಂದು ಗೇಲ್ ಸ್ಪೀಕರ್ ಜಾನ್ ಬರ್ಕೋ ಬಳಿ ದೂರಿದರು.

‘‘ನಾನು ವಾಕ್ ಸ್ವಾತಂತ್ರದ ಪರವಾಗಿ ಇದ್ದೇನೆ. ಆದರೆ, ಸದನದ ಸದಸ್ಯರು ಈ ತಲೆನೋವಿಗೆ ಯಾಕೆ ಒಳಪಡಬೇಕು’’ ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X