Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ನೀರಿನ...

ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಕರ ಹೆಚ್ಚಳಕ್ಕೆ ನಿರ್ಣಯ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ30 Jun 2016 8:50 PM IST
share
ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ನೀರಿನ ಕರ ಹೆಚ್ಚಳಕ್ಕೆ ನಿರ್ಣಯ

ಬಂಟ್ವಾಳ, ಜೂ.30: ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ ತಿಂಗಳಿನಿಂದ ನೀರಿನ ಕರ ಹೆಚ್ಚಿಸಲು ಗುರುವಾರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ ನಿರ್ಣಯವನ್ನು ಅಂಗೀಕರಿಸಿದ್ದು, ಗೃಹಬಳಕೆದಾರರಿಗೆ ಈವರೆಗಿದ್ದ 60 ರೂ. ಇನ್ನು ಮುಂದೆ 80 ರೂ. ಆಗಲಿದ್ದರೆ ವಾಣಿಜ್ಯ ಬಳಕೆಗೆ ಇದ್ದ 150 ರೂ.ವನ್ನು 200ಕ್ಕೆ ಏರಿಸಲಾಗಿದೆ.

ಪುರಸಭೆಯ ಆದಾಯದ ಹಿತದೃಷ್ಟಿಯಿಂದ ಮತ್ತು ಈ ಸಂಬಂಧ ಸರಕಾರದಿಂದಲೂ ಹಲವು ಸುತ್ತೋಲೆಗಳು ಬಂದಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೊರೆಯಾಗದಂತೆ ನೀರಿನ ಕರೆ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಅಧ್ಯಕ್ಷ ರಾಮಕೃಷ್ಣ ಆಳ್ವ ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಸದ್ಯದ ಮಟ್ಟಿಗೆ ನೀರು ಪೂರೈಕೆಯ ವ್ಯವಸ್ಥೆ ಸರಿಯಿಲ್ಲದಿದ್ದು ಮುಂದಿನ ವರ್ಷ 2ನೆ ಹಂತದ ಬೃಹತ್ ಕುಡಿಯುವ ಹಂತದ ಕಾಮಗಾರಿ ಪೂರ್ಣಗೊಂಡ ಬಳಿಕ ನೀರಿನ ಕರ ಹೆಚ್ಚಿಸುವಂತೆ ವಿಪಕ್ಷ ಸದಸ್ಯ ದೇವದಾಸ ಶೆಟ್ಟಿ ಸಲಹೆ ನೀಡಿದರೆ, ಅಕ್ರಮ ನಳ್ಳಿ ನೀರಿನ ಸಂಪರ್ಕ ಪಡೆದವರ ವಿರುದ್ಧ ಹಾಗೂ ಕೆಲವೆಡೆ ಒಂದೇ ಮನೆಗೆ ಮೂರು ನಳ್ಳಿ ನೀರಿನ ಸಂಪರ್ಕ ಪಡೆದವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಸದಸ್ಯರಾದ ವಾಸು ಪೂಜಾರಿ, ಪ್ರವೀಣ್ ಬಿ. ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಅಕ್ರಮ ನಳ್ಳಿ ನೀರಿನ ಸಂಪರ್ಕವನ್ನು ಕಾನೂನುಬದ್ಧವಾಗಿ ಸಕ್ರಮಗೊಳಿಸಲು ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಪುರಸಭೆಯಿಂದ ಶೀಘ್ರವೇ ಪ್ರಕಟನೆಯೊಂದನ್ನು ಹೊರಡಿಸಲಾಗುವುದು ಎಂದು ತಿಳಿಸಿದರು. ಸುದೀರ್ಘ ಚರ್ಚೆಯ ಬಳಿಕ ಗೃಹಬಳಕೆದಾರರರಿಗೆ ಹೀಗಿರುವ 60 ರೂ.ಗೆ 20 ರೂ. ಹೆಚ್ಚಿಸಿ 80 ರೂ. ಹಾಗೆಯೇ ವಾಣಿಜ್ಯ ಬಳಕೆದಾರರರಿಗೆ ಈಗಿರುವ 150 ರೂ.ಗೆ 50 ರೂ. ಹೆಚ್ಚಿಸಿ 200 ರೂ. ಪಡೆಯಲು ನಿರ್ಧಾರ ಕೈಗೊಳ್ಳಲಾಯಿತು.

ಆಡಳಿತ ಸದಸ್ಯರ ಆಕ್ರೋಶ

ಮಳೆಗಾಲಕ್ಕೆ ಮುನ್ನ ಚರಂಡಿಯ ಹೂಳೆತ್ತದಿರುವುದರಿಂದ ಚರಂಡಿಯಲ್ಲಿ ಹರಿಯಬೇಕಾದ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದೆ. ಪ್ರಾಕೃತಿಕ ವಿಕೋಪದಿಂದ ಜಕ್ರಿಬೆಟ್ಟು ಕಾಲೇಜು ಬಳಿ ಲೊರೆಟ್ಟೋ ಪರಿಸರ ಮೊದಲಾದೆಡೆ ಮರಗಳು ಧರಾಶಾಹಿಯಾಗಿವೆ. ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. ದಾರಿದೀಪದ ವ್ಯವಸ್ಥೆಯೇ ಇಲ್ಲ. ಪುರಸಭೆಗೆ ಸಮಸ್ಯೆಯನ್ನು ಹೇಳಿದರೆ ಕೇಳುವವರೇ ಇಲ್ಲದ ಪರಿಸ್ಥಿತಿ ಉಂಟಾಗಿದೆ ಎಂದು ಸದಸ್ಯರಾದ ಗಂಗಾಧರ, ವಾಸು ಪೂಜಾರಿ, ಪ್ರವೀಣ್ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಸುಧಾಕರ್, ಮೆಸ್ಕಾಂ ಸಹಿತ ಇಲಾಖಾಧಿಕಾರಿಗಳಿಗೆ ಸಭೆಯ ನೋಟಿಸು ಜಾರಿಗೊಳಿಸಲಾಗಿದೆ, ಆದರೆ ಅವರು ಗೈರಾಗಿದ್ದಾರೆ. ಬಲವಂತವಾಗಿ ಅವರನ್ನು ಕರೆಸಲು ಸಾಧ್ಯವಿಲ್ಲ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಅಧ್ಯಕ್ಷ ರಾಮಕೃಷ್ಣ ಆಳ್ವ, ಪುರಸಭೆಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳ ಸಭೆಯೊಂದನ್ನು ಶೀಘ್ರವಾಗಿ ನಿಗದಿಪಡಿಸಲಾಗುವುದು. ಆಗ ಎಲ್ಲ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳೋಣ ಎಂದು ಹೇಳುವ ಮೂಲಕ ಚರ್ಚೆಗೆ ತೆರೆ ಎಳೆದರು.

ಬಂಟ್ವಾಳ ಪರಿಸರದಲ್ಲಿ ಡೆಂಗ್, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು, ವ್ಯಾಪಕವಾಗಿದ್ದು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕೊರತೆಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದವರ ಗಮನಸೆಳೆಯುವಂತೆ ಸದಸ್ಯರು ಆಗ್ರಹಿಸಿದರು. ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದೆಂದು ಅಧ್ಯಕ್ಷರು ಭರವಸೆ ನೀಡಿದರು.

ಘನತ್ಯಾಜ್ಯ ವಿಲೇವಾರಿಯಾದ ಸ್ಥಳದಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸುವ ಮೂಲಕ ಕ್ರಿಮಿಗಳನ್ನು ನಾಶಗೊಳಿಸುವ ಕಾರ್ಯ ನಡೆಯಬೇಕು. ಇದಕ್ಕೆ ಪುರಸಭೆಯಿಂದಲೇ ವ್ಯವಸ್ಥೆ ಮಾಡುವಂತೆ ಅವರು ಮುಖ್ಯಾಧಿಕಾರಿಗೆ ಸೂಚಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಮುಹಮ್ಮದ್ ನಂದಾವರ, ಸದಸ್ಯರಾದ ಮುಹಮ್ಮದ್ ಇಕ್ಬಾಲ್ ಐಎಂಆರ್, ಮುನೀಶ್ ಅಲಿ, ಮುಮ್ತಾಝ್, ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X