Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾರಕ ಪಿಡುಗುಗಳನ್ನು ಕೂಡಲೇ...

ಮಾರಕ ಪಿಡುಗುಗಳನ್ನು ಕೂಡಲೇ ನಿಯಂತ್ರಿಸಬೇಕಾಗಿದೆ

-ಸಂಜಯ್ ಕೆ. ಶೆಟ್ಟಿ, ಮಂಗಳೂರು-ಸಂಜಯ್ ಕೆ. ಶೆಟ್ಟಿ, ಮಂಗಳೂರು30 Jun 2016 11:52 PM IST
share
ಮಾರಕ ಪಿಡುಗುಗಳನ್ನು ಕೂಡಲೇ ನಿಯಂತ್ರಿಸಬೇಕಾಗಿದೆ

ಮಾನ್ಯರೆ,
ಮಳೆಗಾಲ ಕಾಲಿಡುತ್ತಿದ್ದಂತೆ ರಾಜ್ಯಾದ್ಯಂತ ಡೆಂಗ್, ಮಲೇರಿಯಾ, ಇಲಿಜ್ವರಗಳಂತಹ ಪಿಡುಗುಗಳ ಹಾವಳಿ ತೀವ್ರವಾಗಿದೆ. ಕಳೆದೊಂದು ತಿಂಗಳಲ್ಲೇ ಡೆಂಗ್ ಜ್ವರವೊಂದಕ್ಕೇ ಕರಾವಳಿಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಸುಮಾರು 12 ಜನರು ಜೀವ ತೆತ್ತಿರುವುದು ಮಾಧ್ಯಮಗಳಿಂದ ವರದಿಯಾಗಿದೆ. ಆರೋಗ್ಯ ಇಲಾಖೆ ಸಾಕಷ್ಟು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆಯೆಂದು ಹೇಳುತ್ತಿದ್ದರೂ ಪರಿಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಾರದಿರುವುದು ಉಭಯ ಜಿಲ್ಲೆಗಳ ಜನರ ನಿದ್ದೆಗೆಡಿಸಿದೆ.
ಪ್ರತೀ ವರ್ಷ ಮಳೆಗಾಲದ ಸಮಯದಲ್ಲಿ ಇಂತಹ ಮಾರಕ ರೋಗಗಳ ಹಾವಳಿ ಸಾಮಾನ್ಯವಾದರೂ ಈ ವರ್ಷ ಆರಂಭದಲ್ಲೇ ಮಾರಕವಾಗತೊಡಗಿದೆ ಈ ಪಿಡುಗು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಹೆಚ್ಚಿಗೆ ಕಂಡುಬಂದಿದೆಯಲ್ಲದೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲೂ ಇದರ ಹಾವಳಿ ತೀವ್ರವಾಗಿದೆ.
ಈ ಪ್ರದೇಶಗಳಲ್ಲಿ ಮಾರಕ ರೋಗಗಳ ಹಾವಳಿ ಹೆಚ್ಚಿಗೆ ಕಂಡು ಬರಲು ಕಾರಣ ಅಡಿಕೆ ತೋಟಗಳಲ್ಲಿ ಕೆಳಕ್ಕೆ ಬಿದ್ದ ಗರಿಯ ಹಾಳೆಗಳಲ್ಲಿ, ರಬ್ಬರ್ ತೋಟಗಳಲ್ಲಿ ರಬ್ಬರ್ ಸಂಗ್ರಹಿಸಲು ಇಡುವ ಗೆರಟೆಗಳಲ್ಲಿ ನೀರು ನಿಲ್ಲುವುದರ ಮೂಲಕ ಸೊಳ್ಳೆಗಳು ಉತ್ಪತ್ತಿಯಾಗಿ ಮಾರಕ ರೋಗಗಳು ಹರಡಿರುವುದಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಡೆಂಗ್ ಹಾವಳಿಗೆ ಹೆಚ್ಚು ಬಲಿಯಾದದ್ದು ಹೊರಜಿಲ್ಲೆಗಳಿಂದ ಬಂದ ಕಾರ್ಮಿಕರಾಗಿದ್ದಾರೆ.
ಇಂತಹ ಸಮಸ್ಯೆಗಳ ಬಗ್ಗೆ ಸಂಬಂಧಿತ ಅಧಿಕಾರಿಗಳು ಮಳೆಗಾಲಕ್ಕೆ ಮೊದಲೇ ಸ್ಥಳೀಯ ಜನತೆಯಲ್ಲಿ ಜಾಗೃತಿ ಮೂಡಿಸಿ, ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದರೆ ಈ ಹಾವಳಿ ಈಗಿನಷ್ಟು ತೀವ್ರತೆ ಪಡೆಯುತ್ತಿರಲಿಲ್ಲ. ಇನ್ನಾದರೂ ಸಂಬಂಧಿತ ಇಲಾಖೆ ಸಮರೋಪಾದಿಯಲ್ಲಿ ಪಿಡುಗಿನ ನಿಯಂತ್ರಣ ಮಾಡುವಲ್ಲಿ ಶ್ರಮಿಸಬೇಕಾಗಿದೆ. ಡೆಂಗ್‌ನಂತಹ ಅಪಾಯಕಾರಿ ಪಿಡುಗಿಗೆ ತುತ್ತಾಗಿರುವ ರೋಗಿಗಳನ್ನು ಆರಂಭದ ಹಂತದಲ್ಲೇ ಗುರುತಿಸಿ ಅವರಿಗೆ ತುರ್ತಾಗಿ ಚಿಕಿತ್ಸೆ ಒದಗಿಸುವ ಮೂಲಕ ಇನ್ನಷ್ಟು ಜೀವಹಾನಿ ತಪ್ಪಿಸಬೇಕಾಗಿದೆ.

share
-ಸಂಜಯ್ ಕೆ. ಶೆಟ್ಟಿ, ಮಂಗಳೂರು
-ಸಂಜಯ್ ಕೆ. ಶೆಟ್ಟಿ, ಮಂಗಳೂರು
Next Story
X