ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಸೆರೆ
ಗಂಗೊಳ್ಳಿ, ಜೂ.30: ಬೆಣ್ಗೇರಿ ಎಂಬಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಯುವಕನನ್ನು ಗಂಗೊಳ್ಳಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತನನ್ನು ಬಾವಿಕಟ್ಟೆಯ ಸೂರಜ್(19) ಎಂದು ಗುರುತಿಸಲಾಗಿದೆ. ಕೋಟೇಶ್ವರದಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿರುವ ಗುಜ್ಜಾಡಿಯ 19ವರ್ಷದ ಯುವತಿ ಗುರುವಾರ ಬೆಳಗ್ಗೆ ಮನೆಯಿಂದ ಗುಜ್ಜಾಡಿ ಬಸ್ ನಿಲ್ದಾಣಕ್ಕೆ ಬರುತ್ತಿರುವಾಗ ಕಾಡು ಹಾದಿಯಲ್ಲಿ ಸೂರಜ್ ಆಕೆಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಬೊಬ್ಬೆ ಹಾಕಿದಾಗ ಯುವತಿಯ ಮೇಲೆ ಹಲ್ಲೆ ನಡೆಸಿ ಸೂರಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಈ ವಿಚಾರವನ್ನು ಮುಚ್ಚಿಟ್ಟಿದ್ದ ಆಕೆ ಸಂಜೆ ಮನೆಯವರಿಗೆ ತಿಳಿಸಿದಳೆನ್ನಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರು ಸೂರಜ್ ವಿರುದ್ಧ ದೂರು ನೀಡಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜು.12ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





