ರಿಕ್ಷಾ ಢಿಕ್ಕಿ: ಪಾದಚಾರಿ ಮೃತ್ಯು
ಕಾರ್ಕಳ, ಜೂ.30: ಇಲ್ಲಿನ ವಿ.ಕೆ. ಡೆಕೊರೇಟರ್ಸ್ ಬಳಿ ಗುರುವಾರ ರಾತ್ರಿ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ತೆಳ್ಳಾರು ನಿವಾಸಿ ಪ್ರಕಾಶ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರು ಅನಂತಶಯನದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ರಿಕ್ಷಾ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಶೆಟ್ಟಿಯವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





