ಮಗುವಿನೊಂದಿಗೆ ತಾಯಿ ನಾಪತ್ತೆ
ಬಂಟ್ವಾಳ, ಜೂ. 30: ಐದು ವರ್ಷ ಪ್ರಾಯದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆಯಾದ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕಾಮಾಜೆ ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಹೊಟೇಲ್ ಮಾಲಕ ಗಂಗಾಧರ ಪೂಜಾರಿ ಎಂಬವರ ಪತ್ನಿ ಅನಿತಾ ನಾಪತ್ತೆಯಾದ ಮಹಿಳೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಂಗಾಧರ ಪೂಜಾರಿ ಎಂದಿನಂತೆ ಗುರುವಾರ ಬೆಳಗ್ಗೆ ಕೆಲಸಕ್ಕೆ ಹೋದ ಬಳಿಕ ಅವರ ಪತ್ನಿ ಅನಿತಾ ತನ್ನ ಐದು ವರ್ಷ ಪ್ರಾಯದ ಪುತ್ರಿ ಯಸ್ಮಿತಾ ಜೊತೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story





