ಉಡುಪಿ: ಶಿಕ್ಷಕರ ಅರ್ಹತಾ ಪರೀಕ್ಷೆ ತೇರ್ಗಡೆಗೊಂಡವರಿಗೆ ಸೂಚನೆ
ಉಡುಪಿ, ಜೂ.30: ಜಿಲ್ಲೆಯಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2015ರಲ್ಲಿ ಉತ್ತೀರ್ಣರಾದ 1,065 ಅಭ್ಯರ್ಥಿಗಳ ಪ್ರಮಾಣ ಪತ್ರಗಳನ್ನು ಜು.1ರಿಂದ 30ರವರೆಗೆ ಮಣಿಪಾಲದ ರಜತಾದ್ರಿಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಪರಾಹ್ನ 3ರಿಂದ 5ರವರೆಗೆ ವಿತರಿಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ರಜಾದಿನಗಳನ್ನು ಹೊರತುಪಡಿಸಿ ಇತರ ದಿನಗಳಂದು ಪ್ರವೇಶ ಪತ್ರ ಹಾಜರು ಪಡಿಸಿ ಪ್ರಮಾಣ ಪತ್ರವನ್ನು ಪಡೆದು ಕೊಳ್ಳಬಹುದು ಎಂದು ಡಿಡಿಪಿಐ ಕಚೇರಿ ಪ್ರಕಟನೆ ತಿಳಿಸಿದೆ.
Next Story





