Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಡೀ ದೇಶ ನಡುಗಿಸುವ ಯಾವ ಸತ್ಯ...

ಇಡೀ ದೇಶ ನಡುಗಿಸುವ ಯಾವ ಸತ್ಯ ಮುಚ್ಚಿಟ್ಟಿದ್ದಾರೆ ಬಿಜೆಪಿ ನಾಯಕ ಏಕ್‌ನಾಥ್ ಖಡ್ಸೆ

ಪದಚ್ಯುತ ಸಚಿವನಿಂದ ಬಾಯಿ ಬಿಡುವ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ1 July 2016 12:05 AM IST
share
ಇಡೀ ದೇಶ ನಡುಗಿಸುವ ಯಾವ ಸತ್ಯ ಮುಚ್ಚಿಟ್ಟಿದ್ದಾರೆ ಬಿಜೆಪಿ ನಾಯಕ ಏಕ್‌ನಾಥ್ ಖಡ್ಸೆ

ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಿಜೆಪಿ ದಿಗ್ಗಜ ಏಕನಾಥ್ ಖಡ್ಸೆ ತಿಂಗಳ ಬಳಿಕ ನೀಡಿರುವ ಹೇಳಿಕೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ತಾನು ಬಚ್ಚಿಟ್ಟಿರುವ ಸತ್ಯವನ್ನು ಹೊರ ಹಾಕಿದಲ್ಲಿ ಇಡೀ ದೇಶವೇ ಅಲುಗಾಡಲಿದೆ ಎಂದು ತಮ್ಮ ಜಾಲಗಾಂವ್ ಕ್ಷೇತ್ರದಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡುತ್ತಾ ಖಡ್ಸೆ ಹೇಳಿದ್ದಾರೆ.

ನನ್ನ ವಿರುದ್ಧ ಆರೋಪಗಳ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡಿದ್ದೇನಾದರೂ, ನಾನು ಬಾಯಿ ತೆರೆದರೆ ಇಡೀ ದೇಶವೇ ಅಲುಗಾಡಲಿದೆ ಎಂದು ಅವರು ಹೇಳಿದ್ದಾರೆ. ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಈ ಸಂದರ್ಭದಲ್ಲಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಶಿವಸೇನೆ ಜೊತೆಗೆ ಮಾತುಕತೆ ಮೂಲಕ ಬಿಜೆಪಿ ಕೇಸರಿ ಮೈತ್ರಿಕೂಟ ರಚಿಸಲು ತಾನೇ ಕಾರಣ ಎಂದು ಖಡ್ಸೆ ಹೇಳಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಮೈತ್ರಿಯನ್ನು ವಿಧಾನಸಭೆ ಚುನಾವಣೆಗೆ ಮೊದಲೇ ಮಾಡಿರದೆ ಇರುತ್ತಿದ್ದಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆಯ ಮುಖ್ಯಮಂತ್ರಿ ಇರುತ್ತಿದ್ದರು. ನಾನು ಮೈತ್ರಿಯಲ್ಲಿ ಮುಖ್ಯ ಪಾತ್ರ ವಹಿಸಿದ ಕಾರಣದಿಂದಲೇ ಈಗ ಬಿಜೆಪಿಯ ಮುಖ್ಯಮಂತ್ರಿ ಇದ್ದಾರೆ ಎಂದು ಖಡ್ಸೆ ಹೇಳಿದ್ದಾರೆ.

ಕಂದಾಯ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ಸಚಿವ ಸಂಪುಟದಲ್ಲಿ ಹೊಂದಿದ್ದ ಖಡ್ಸೆ ಜೂನ್ ಆರಂಭದಲ್ಲಿ ರಾಜೀನಾಮೆ ನೀಡಿದ್ದರು. ಅವರ ವಿರುದ್ಧ ಭೂ ಅಕ್ರಮದ ಆರೋಪಗಳು ಬಂದಿವೆ ಮತ್ತು ಭೂಗತ ದೊರೆ ದಾವೂದ್ ಇಬ್ರಾಹೀಂ ಪಾಕಿಸ್ತಾನದಿಂದ ಮಾಡಿದ ಕರೆಗಳು ಅವರ ಮೊಬೈಲಿಗೆ ಬಂದಿರುವ ಆರೋಪವೂ ಇವೆ. ಫಡ್ನವೀಸ್ ಸರಕಾರವು ಈ ಆರೋಪಗಳ ಮೇಲೆ ನ್ಯಾಯಾಂಗ ತನಿಖೆಯನ್ನು ಆದೇಶಿಸಿದೆ. ಖಡ್ಸೆ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಬಿಜೆಪಿಯ ಹಿಂದುಳಿದ ವರ್ಗದ ಮುಖ ಎಂದೇ ತಿಳಿಯಲಾಗಿರುವ ಖಡ್ಸೆಯ ಮಾತುಗಳಿಗೆ ಕಾಂಗ್ರೆಸ್ ಮತ್ತು ಎನ್‌ಸಿಪಿಯಿಂದ ತೀವ್ರ ಪ್ರತಿಕ್ರಿಯೆಗಳು ಬಂದಿವೆ. ಖಡ್ಸೆಗೆ ದಾವೂದ್ ಇಬ್ರಾಹೀಂ ಜೊತೆಗೆ ಸಂಬಂಧವಿದೆ ಎನ್ನುವ ಆರೋಪಗಳು ಬಹಳ ಹಿಂದಿನಿಂದಲೇ ಕೇಳಿ ಬಂದಿವೆ. ಈಗ ಅವರೇ ದೇಶವನ್ನೇ ನಡುಗಿಸಬಲ್ಲ ಮಾಹಿತಿ ತಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಅವರಿಗೆ ದಾವೂದ್ ಬಗ್ಗೆ ಅಥವಾ ತಮ್ಮ ಜೊತೆಗೆ ಸಂಬಂಧವಿರುವ ಇತರ ಭಯೋತ್ಪಾದನಾ ಸಂಘಟನೆಗಳ ಬಗ್ಗೆ ಮಾಹಿತಿಯಿದೆ. ಎಟಿಎಸ್ ತಕ್ಷಣವೇ ಅವರನ್ನು ವಶಕ್ಕೆ ತೆಗೆದುಕೊಂಡು ಮಾಹಿತಿ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಅಲ್ ನಾಸೆರ್ ಝಕಾರಿಯ ಹೇಳಿದ್ದಾರೆ. ಖಡ್ಸೆ ಸೂಕ್ತ ಸಾಕ್ಷ್ಯವಿಲ್ಲದೆ ಮಾತನಾಡುವುದಿಲ್ಲ ಎಂದು ಯಾವಾಗಲೂ ಹೇಳುತ್ತಿದ್ದರು. ಇಂದು ಅವರ ಬಳಿ ಮಾಹಿತಿ ಇದೆ ಎಂದು ಹೇಳುತ್ತಿದ್ದಾರಾದರೂ ಅವರ ಬಳಿ ಯಾವುದೋ ಗಂಭೀರ ಸಾಕ್ಷ್ಯಗಳಿವೆ ಎನ್ನುವುದನ್ನು ನಂಬದೆ ಇರಲು ಸಾಧ್ಯವಿಲ್ಲ. ದಾವೂದ್ ಜೊತೆಗೆ ಸಂಭಾಷಣೆ ಅಥವಾ ಇನ್ಯಾವುದೋ ರೀತಿಯ ಸಂಪರ್ಕದಿಂದ ಅವರ ಬಳಿ ಮಾಹಿತಿ ಇದೆ ಎಂದು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X