ಜಾಲ್ಸೂರು: ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು

ಸುಳ್ಯ, ಜು.1: ಜಾಲ್ಸೂರಿನ ನಡುವಡ್ಕ ಎಂಬಲ್ಲಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ, ಪಾದಚಾರಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮಡಿಕೇರಿಯಿಂದ ಮಂಗಳೂರಿಗೆ ಹೋಗುವ ಕಾರೊಂದು ನಡುವಡ್ಕ ಎಂಬಲ್ಲಿ ಕುಂಬ್ರದ ಪರ್ಪುಂಜದ ಆಯಿಷಾ (35) ಅವರು ರಸ್ತೆ ದಾಟುತ್ತಿರುವ ವೇಳೆ ಢಿಕ್ಕಿ ಹೊಡೆಯಿತು. ಪರಿಣಾಮ ಆಯಿಷಾ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದರು.
ಈ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





