ಮುಖ್ಯಮಂತ್ರಿ ಬದಲಾವಣೆ ಇಲ್ಲ: ಗುಂಡೂರಾವ್ ಸ್ಪಷ್ಟನೆ

ಮಡಿಕೇರಿ, ಜು.1: ಒಬ್ಬರ ಒತ್ತಾಯಕ್ಕೆ ಮಣಿದು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಸರಕಾರ ಐದು ವರ್ಷಗಳನ್ನು ಪೂರೈಸಲಿದೆ ಎಂದರು.
ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಹೇಳಿಕೆ ನೀಡಿದಾಕ್ಷಣ ಮುಖ್ಯಮಂತ್ರಿ ಬದಲಾವಣೆಯಾಗಲ್ಲ. ಹಿರಿಯ ನಾಯಕರಾಗಿರುವ ಶ್ರೀನಿವಾಸ್ ಪ್ರಸಾದ್ ಬಗ್ಗೆ ಅತೀವ ಗೌರವವಿದೆ. ಆದರೆ ಪಕ್ಷದ ನಿಯಮ, ಶಿಸ್ತನ್ನು ಪಾಲಿಸಬೇಕಾಗಿದ್ದು, ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಈ ಸಂದಭರ್ದಲ್ಲಿ ಮಾತನಾಡಿದ ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎಂ.ಆರ್.ಸೀತಾರಾಮ್ ಸಂಪುಟ ಪುನರ್‌ರಚನೆಯಿಂದ ಕೆಲವರಿಗೆ ಬೇಸರವಾಗಿರಬಹುದು. ಆದರೆ ಯಾವುದೇ ಭಿನ್ನಮತವಿಲ್ಲ, ಬೆರಳೆಣಿಕೆಯಷ್ಟು ಮಂದಿ ಮಾತ್ರ ಅಸಮಧಾನಗೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
Next Story





