ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಸಚಿವ ಸೀತಾರಾಂ
ಮಡಿಕೇರಿ, ಜು.1: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಅರಣ್ಯ ಸಚಿವರ ಜೊತೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಸೀತಾರಾಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಡಾನೆಗಳನ್ನು ಕೊಲ್ಲುವುದು ಪರಿಹಾರ ಅಲ್ಲ. ಕಾಡಾನೆ ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಕಾರ್ಯತಂತ್ರ ರೂಪಿಸಬೇಕಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಅನಧಿಕೃತ ಹೋಂ ಸ್ಟೇಗಳ ನಿಯಂತ್ರಣ ಸಂಬಂಧ ಪ್ರವಾಸೋದ್ಯಮ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಸರಕಾರ ಜನಪರವಾದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ತಿಳಿಸಿದರು.
Next Story





