Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹೈದರಾಬಾದ್ ಮುಸ್ಲಿಮ್ ಯುವಕರು ಸುಲಭ...

‘ಹೈದರಾಬಾದ್ ಮುಸ್ಲಿಮ್ ಯುವಕರು ಸುಲಭ ಟಾರ್ಗೆಟ್’

ಭಯೋತ್ಪಾದನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ1 July 2016 11:46 PM IST
share

ಹೈದರಾಬಾದ್, ಜು.1: ಬುಧವಾರ ಹಳೆ ಹೈದರಾಬಾದ್ ಪ್ರದೇಶದ ಐದು ಯುವಕರನ್ನು ಇಸ್ಲಾಮಿಕ್ ಸ್ಟೇಟ್ ಬೆಂಬಲಿಗರೆಂಬ ಆರೋಪದ ಮೇಲೆ ಬಂಧಿಸಿರುವ ಘಟನೆಯಿಂದ ಉಗ್ರವಾದಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈದರಾಬಾದ್ ಮುಸ್ಲಿಮ್ ಯುವಕರು ಸುಲಭ ಟಾರ್ಗೆಟ್ ಆಗುತ್ತಾರೆಂದು, ಆಯುಬ್ ಅಲಿ ಖಾನ್ ಎಂಬ ಅಂಕಣಕಾರ ಹೇಳುತ್ತಾರೆಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಬುಧವಾರದ ಅಪರಾಹ್ನ ಇಲ್ಲಿನ ಮುಸ್ಲಿಮ್ ಸಮುದಾಯ ರಮಝಾನ್ ಪ್ರಾರ್ಥನೆಗೆ ತಯಾರಾಗುತ್ತಿದ್ದಂತೆಯೇ ಐದು ಮಂದಿ ಯುವಕರ ಬಂಧನದ ಸುದ್ದಿ ಬರಸಿಡಿಲಿನಂತೆ ಎರಗಿತ್ತು. ಬಂಧಿತರಾದವರಲ್ಲಿ ಯಾರೂ ಯಾವುದೇ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿಲ್ಲವೆಂಬುದು ಸ್ಥಳೀಯ ಜನರ ವಾದವಾಗಿದೆ. ಇದು ಮುಸ್ಲಿಮ್ ಸಮುದಾಯದಲ್ಲಿ ಅಸುರಕ್ಷತೆಯ ಭಾವನೆ ಮೂಡಿಸಿದೆಯೆಂದೂ ಅವರು ಹೇಳುತ್ತಾರೆ. ಬಂಧಿತರಲ್ಲಿ ಒಬ್ಬನಾದ ಮುಹಮ್ಮದ್ ಇಬ್ರಾಹೀಂ ಯಾಜ್ದಾನಿ (30) ಇಂಜಿನಿಯರಿಂಗ್ ಪದವೀಧರನಾಗಿದ್ದು ಇ-ಕಾಮರ್ಸ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಆತನ ಸಹೋದರ ಇಲ್ಯಾಸ್ (20) ಇತ್ತೀಚೆಗಷ್ಟೇ ಪದವಿ ಮುಗಿಸಿದ್ದಾನೆ.
  ಅಂಕಣಕಾರ ಆಯೂಬ್ ಆಲಿ ಖಾನ್ ಹೇಳುವಂತೆ ಕೆಲವೇ ಕೆಲವು ಪ್ರಕರಣಗಳ ಹೊರತಾಗಿ ಹೆಚ್ಚಿನ ಪ್ರಕರಣಗಳಲ್ಲಿ ಹೀಗೆ ಬಂಧಿತರಾದ ಮುಸ್ಲಿಮ್ ಯುವಕರ ವಿರುದ್ಧದ ಆರೋಪಗಳನ್ನು ಪೊಲೀಸರಿಗೆ ಸಾಬೀತು ಪಡಿಸಲಾಗಿಲ್ಲ. 2007ರ ಮಕ್ಕಾ ಮಸೀದಿ ಸ್ಫೋಟದ ಬಳಿಕ ಪೊಲೀಸರು ನೂರಾರು ಮುಸ್ಲಿಮ್ ಯುವಕರನ್ನು ವಶಪಡಿಸಿಕೊಂಡು 21 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರಲ್ಲದೆ ಅವರನ್ನು 18 ತಿಂಗಳುಗಳ ಕಾಲ ಜೈಲಿನಲ್ಲಿರಿಸಿದ್ದರು. ಎಲ್ಲರನ್ನೂ 2009ರಲ್ಲಿ ಖುಲಾಸೆಗೋಳಿಸಲಾಗಿತ್ತಲ್ಲದೆ ಬಂಧಿತರನ್ನು ಬಿಡುಗಡೆಗೊಳಿಸುವಾಗ ಒಂದು ಲಕ್ಷ ರೂಪಾಯಿ ಪರಿಹಾರ ಕೂಡ ನೀಡಲಾಗಿತ್ತು. ಅದೇ ವರ್ಷ ಲುಂಬಿನಿ ಪಾರ್ಕ್ ಮತ್ತು ಗೋಕುಲ್ ಚಾಟ್ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ 50 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದ್ದರೂ ಯಾರೊಬ್ಬರ ವಿರುದ್ಧದ ಆರೋಪವನ್ನೂ ಸಾಬೀತುಪಡಿಸಲು ಸಾಧ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X