Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಗತ್ತಿನಲ್ಲಿ ಎಲ್ಲಕ್ಕಿಂತ ಮೇಲಿದ್ದ...

ಜಗತ್ತಿನಲ್ಲಿ ಎಲ್ಲಕ್ಕಿಂತ ಮೇಲಿದ್ದ ಅನುಭವ ನೀಡಿದ ತೇಜಸ್ ಹಾರಾಟ: ಪೈಲಟ್

ವಾರ್ತಾಭಾರತಿವಾರ್ತಾಭಾರತಿ1 July 2016 11:53 PM IST
share

ಬೆಂಗಳೂರು,ಜು.1: ಭಾರತೀಯ ವಾಯುಪಡೆಗೆ ಶುಕ್ರವಾರ ಅಧಿಕೃತವಾಗಿ ಸೇರ್ಪಡೆಗೊಂಡ ದೇಶಿ ನಿರ್ಮಿತ ತೇಜಸ್ ಲಘು ಯುದ್ಧವಿಮಾನ ಹಾರಾಟ ಜಗತ್ತಿನಲ್ಲಿ ಅತ್ಯಂತ ಎತ್ತರದಲ್ಲಿದ್ದ ಅನುಭವವನ್ನು ನೀಡಿತ್ತು ಎಂದು ಗ್ರೂಪ್ ಕ್ಯಾಪ್ಟನ್ ಮಾಧವ ರಂಗಾಚಾರಿ ಅವರು ಹೇಳಿದರು.

ಮೋಡ ಮುಸುಕಿದ್ದ ಮತ್ತು ಬಲವಾದ ಗಾಳಿ ಬೀಸುತ್ತಿದ್ದ ವಾತಾವರಣದಲ್ಲಿ ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಹಾರಾಟ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಂಗಾಚಾರಿ, ವಾಯುಪಡೆಗೆ ಸೇರ್ಪಡೆಗೊಂಡ ಬೆನ್ನಿಗೇ ಉದ್ಘಾಟನಾ ಹಾರಾಟ ನಡೆಸುವ ಅವಕಾಶ ಓರ್ವ ಪೈಲಟ್‌ನ ಪಾಲಿಗೆ ಗೌರವ ಮತ್ತು ಸುಯೋಗವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
40ರ ಹರೆಯದ ಟೆಸ್ಟ್ ಪೈಲಟ್ ರಂಗಾಚಾರಿ ವಾಯುಪಡೆಯ ಫ್ಲೈಯಿಂಗ್ ಡ್ಯಾಗರ್ಸ್ ಎಂದೇ ಪರಿಚಿತವಾಗಿರುವ 45 ಸ್ಕ್ವಾಡ್ರನ್ನಿನ ಕಮಾಂಡಿಂಗ್ ಆಫೀಸರ್ ಆಗಿದ್ದಾರೆ. 3,000 ಗಂಟೆಗಳ ಹಾರಾಟ ಅನುಭವವನ್ನು ಹೊಂದಿರುವ ಅವರು ಒಂದು ವರ್ಷದಿಂದ ಮಿರಾಜ್ 2000 ಸ್ಕ್ವಾಡ್ರನ್ನಿನ ಭಾಗವಾಗಿದ್ದಾರೆ.
 ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ವಾಯುಪಡೆಯ ಎಎಸ್‌ಟಿಇ ಟರ್ಮ್ಯಾಕ್‌ನಿಂದ ಹಾರಾಟವನ್ನು ಆರಂಭಿಸಿದ ರಂಗಾಚಾರಿ 1,500 ಅಡಿ ಎತ್ತರದಲ್ಲಿ ಪ್ರತಿ ಗಂಟೆಗೆ 900 ಕಿ.ಮೀ.ವೇಗದಲ್ಲಿ ತೇಜಸ್‌ನ್ನು ಹಾರಿಸಿದರು. ಬೆಂಗಳೂರಿನ ಆಕಾಶದಲ್ಲಿ ಈ ಹಾರಾಟ ಸ್ಪಷ್ಟವಾಗಿ ಗೋಚರಿಸುತ್ತಿತ್ತು.
ತೇಜಸ್‌ನ್ನು ಪ್ರಶಂಸಿಸಿದ ಅವರು,ಇದು ಅತ್ಯುತ್ತಮ ವಿಮಾನವಾಗಿದ್ದು,ವಿಶ್ವದಲ್ಲಿಯ ಇತರ ಯುದ್ಧ ವಿಮಾನಗಳಿಗಿಂತ ತಲೆಮಾರುಗಳಷ್ಟು ಮುಂದಿದೆ. ಅದು ತನ್ನ ವರ್ಗ(ಲಘು ಯುದ್ಧವಿಮಾನ)ದಲ್ಲಿ ಏಕೈಕ ವಿಮಾನವಾಗಿರುವುದರಿಂದ ಅದನ್ನು ಇತರ ಮಿಲಿಟರಿ ವಿಮಾನಗಳೊಂದಿಗೆ ಹೋಲಿಸುವಂತಿಲ್ಲ ಎಂದರು.
ಹಾರಾಟ ಪ್ರದರ್ಶನ ಮತ್ತು ವಿಮಾನಗಳ ಕಸರತ್ತು ಸಂದರ್ಭದಲ್ಲಿ ಅವು ಯಾವುದೇ ಶಸ್ತ್ರಾಸ್ತ್ರಗಳನ್ನು ಹೊಂದಿರುವುದಿಲ್ಲ. ತಾನು ತೇಜಸ್‌ನ ಪರೀಕ್ಷಾರ್ಥ ಹಾರಾಟಗಳ ಸಂದರ್ಭದಲ್ಲಿ ಕ್ಷಿಪಣಿಗಳು ಮತ್ತು ಲೇಸರ್ ನಿರ್ದೇಶಿತ ಬಾಂಬ್‌ಗಳೊಂದಿಗೆ ಹಾರಾಟ ನಡೆಸಿದ್ದೇನೆ. ಅದು ಅತ್ಯುತ್ತಮ ದಾಳಿ ಸಾಮರ್ಥ್ಯವನ್ನು ಹೊಂದಿದೆ. ಅದು ನಾಲ್ಕು ಟನ್‌ಗಳಷ್ಟು ಪೇ ಲೋಡ್‌ನ್ನು ಹೊತ್ತೊಯ್ಯಬಲ್ಲುದು ಎಂದು ರಂಗಾಚಾರಿ ತಿಳಿಸಿದರು.
ತೇಜಸ್ ಸ್ಕ್ವಾಡ್ರನ್ ತನ್ನ ನಿಯೋಜಿತ ವಾಯುನೆಲೆಯಾದ ತಮಿಳುನಾಡಿನ ಕೊಯಮತ್ತೂರು ಸಮೀಪದ ಸೂಳೂರಿಗೆ ಸ್ಥಳಾಂತರಗೊಳ್ಳುವ ಮುನ್ನ ಎರಡು ವರ್ಷಗಳ ಕಾಲ ಬೆಂಗಳೂರಿನಿಂದಲೇ ಕಾರ್ಯ ನಿರ್ವಹಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X