Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹತ್ತು ಸಾವಿರ ಅತಿಥಿ ಶಿಕ್ಷಕರ ನೇಮಕ:...

ಹತ್ತು ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ತನ್ವೀರ್ ಸೇಠ್

‘ ಪ್ರಾಥಮಿಕ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ’

ವಾರ್ತಾಭಾರತಿವಾರ್ತಾಭಾರತಿ2 July 2016 7:00 PM IST
share
ಹತ್ತು ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ತನ್ವೀರ್ ಸೇಠ್

ಬೆಂಗಳೂರು, ಜು. 2: ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಕೂಡಲೆ ಹತ್ತು ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಶನಿವಾರ ನಗರದ ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಮಾತೃಭಾಷಾ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 22 ಸಾವಿರ ಶಿಕ್ಷಕರ ಕೊರತೆಯಿದೆ. ಈ ಪ್ರಮಾಣದಷ್ಟು ಶಿಕ್ಷಕರನ್ನು ಏಕಾಏಕಿ ನೇಮಕ ಮಾಡಲು ಸಾಧ್ಯವಿಲ್ಲ. ಹೀಗಾಗಿ ತಾತ್ಕಾಲಿಕವಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಹಾಜರಾತಿ ಕಡಿಮೆ ಇರುವ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕೂಡಲೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಿವೃತ್ತಿ ಪಡೆದ ಶಿಕ್ಷಕರ ಮುಂದುವರಿಕೆ:ಜೂ.1ರಿಂದ ಫೆಬ್ರವರಿ ತಿಂಗಳ ಒಳಗಾಗಿ ನಿವೃತ್ತಿ ಪಡೆಯುವ ಶಿಕ್ಷಕರನ್ನು ಶೈಕ್ಷಣಿಕ ವರ್ಷ ಮುಕ್ತಾಯದವರೆಗೂ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲ ಶಿಕ್ಷಕರು ಮಾರ್ಚ್ ತಿಂಗಳವರೆಗೂ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಯಾವುದೇ ಕಾರಣಕ್ಕೂ ಹಾಜರಾತಿ ಕಡಿಮೆ ಇರುವ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದಿಲ್ಲ. ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆಗೆ ಸರಕಾರ ಬದ್ಧವಾಗಿದೆ. ಸರಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ತಾರತಮ್ಯ ನಿವಾರಣೆ ಮತ್ತು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಪೂರೈಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ ಕನ್ನಡ ಮಾಧ್ಯಮ ಶಾಲೆಗಳು ಉಳಿಸುವ ಸಾಧ್ಯತೆ ಪೋಷಕರ ಮನಸ್ಥಿತಿ ಮೇಲಿದೆ. ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ತೊರೆದು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ದಾಖಲಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಮಾತನಾಡಿ, ಕನ್ನಡ ಶಾಲೆಗಳನ್ನು ಮುಚ್ಚುವ ಬದಲು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು. ಶಿಕ್ಷಕರ ಕೊರತೆಯನ್ನು ತುಂಬುವ ಜೊತೆಗೆ ಕಲಿಕಾ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಮಾತನಾಡಿ, ಕೆಲವೇ ಭಾಷೆಗಳಲ್ಲಿ ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಭಾಷಾ ತಾರತಮ್ಯ ಮಾಡುತ್ತಿದೆ. ದೇಶದಲ್ಲಿ ಎಲ್ಲ ಪ್ರಾತಿನಿಧಿಕ ಭಾಷೆಗಳಲ್ಲಿ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ನಡೆಸು ಮೂಲಕ ಈ ತಾರತಮ್ಯವನ್ನು ತೊಡೆದು ಹಾಕಲು ಪ್ರಯತ್ನಿಸಬೇಕು ಎಂದರು.

ಬುದ್ಧಿಜೀವಿಗಳು, ವಿಚಾರವಂತರು, ಸಾಹಿತಿಗಳು ಸಂಘ ಸಂಸ್ಥೆಗಳು ಮಾತೃಭಾಷೆಗಳನ್ನು ಉಳಿಸಲು ನಡೆಸುವ ಹೋರಾಟಗಳಿಗೆ ಸುಪ್ರೀಂ ಕೋರ್ಟ್ ತಣ್ಣೀರೆರಚುತ್ತಿದೆ. ಮಾತೃ ಭಾಷಾ ರಕ್ಷಣೆಗೆ ಮಾರಕವಾಗಿರುವ ನ್ಯಾಯಾಲಯದ ನಿಲುವುಗಳ ವಿರುದ್ಧ ಪ್ರಬಲವಾದ ಜನಾದೇಶ ರೂಪಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

 ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳೀಧರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಂಬಾರ ಮನವಿ

ಕನ್ನಡ ಶಾಲೆಗಳನ್ನು ಯಾವುದೇ ಕಾರಣಕ್ಕೂ ಇಂಗ್ಲಿಷ್ ಶಾಲೆಗಳಾಗಿ ಪರಿವರ್ತಿಸಬಾರದು. ಎಲ್ಲ ಸರಕಾರಿ ಶಾಲೆಗಳಿಗೂ ಮೂಲಭೂತ ಸೌಲಭ್ಯಗಳನ್ನು ಕೂಡಲೆ ಒದಗಿಸಬೇಕು. ಇನ್ನು ಮುಂದೆ ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ನೀಡಬಾರದು ಹಾಗೂ ದೇಶದ ಎಲ್ಲ ಭಾಷಾ ಅಕಾಡಮಿಗಳ ಜೊತೆಗೂಡಿ ಏಕರೂಪ ಶಿಕ್ಷಣ ಪದ್ಧತಿ ಜಾರಿಗೊಳಿಸಲು ರಾಜಕೀಯ ನಾಯಕರು ಕೇಂದ್ರ ಸರಕಾರಕ್ಕೆ ಒತ್ತಡ ತರಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರು ವೇದಿಕೆಯಲ್ಲಿದ್ದ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ತನ್ವೀರ್ ಸೇಠ್, ಸರಕಾರಿ ಶಾಲೆಗಳು ನೇರವಾಗಿ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ಮಾಡುವ ಪರಿಸ್ಥಿತಿ ಬಂದಿದೆ. ಸರಕಾರಿ ಶಾಲೆಗಳನ್ನು ಉಳಿಸಲು ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಶಿಕ್ಷಣ ಇಲಾಖೆ ಜೊತೆಗೆ ಇತರೆ ಇಲಾಖೆಗಳು ಸರಕಾರಿ ಶಾಲೆಗಳನ್ನು ಉಳಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಎಲ್ಲ ಶಾಸಕ ಮತ್ತು ನಾಮನಿರ್ದೇಶಿತ ಶಾಸಕರು ಪ್ರತಿನಿಧಿಸುವ ಕ್ಷೇತ್ರದಲ್ಲಿ ವರ್ಷಕ್ಕೆ ಒಂದರಂತೆ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X