Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ದೇವಾಲಯದಿಂದ ಲಕ್ಷಾಂತರ...

ಬೆಳ್ತಂಗಡಿ: ದೇವಾಲಯದಿಂದ ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

ವಾರ್ತಾಭಾರತಿವಾರ್ತಾಭಾರತಿ2 July 2016 8:38 PM IST
share
ಬೆಳ್ತಂಗಡಿ: ದೇವಾಲಯದಿಂದ ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

ಉಪ್ಪಿನಂಗಡಿ, ಜು.2: ದೇವಾಲಯಕ್ಕೆ ನುಗ್ಗಿದ ಕಳ್ಳರು ಅಲ್ಲಿದ್ದ ಚಿನ್ನ-ಬೆಳ್ಳಿಯ ಆಭರಣ, ನಗದು ಸೇರಿದಂತೆ ಸುಮಾರು 4.50 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವುಗೈದಿರುವುದು ಶನಿವಾರ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ವರದಿಯಾಗಿದೆ.

ದೇವಾಲಯದ ಮುಂಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿರುವ ಕಳ್ಳರು ಗರ್ಭಗುಡಿಯ ಬಳಿ ಹೊರಾಂಗಣದಲ್ಲಿ ಇಡಲಾಗಿದ್ದ ಕಾಣಿಕೆ ಡಬ್ಬಿಯ ಲಾಕರ್ ಅನ್ನು ಒಡೆದು ಅದರಲ್ಲಿದ್ದ ಒಂದೂವರೆ ಪವನ್‌ನ ಚಿನ್ನದ ಸರ, ಚಿನ್ನದ ಸರಿಗೆ, 10 ಬೆಳ್ಳಿಯ ಮುಖವಾಡ ಸೇರಿದಂತೆ ಸುಮಾರು 4 ಕೆ.ಜಿ. ಬೆಳ್ಳಿಯ ಸೊತ್ತುಗಳು ಹಾಗೂ ಅದರಲ್ಲಿದ್ದ ನಗದನ್ನು ಕಳವುಗೈದಿದ್ದಾರೆ. ಕಳವಾಗಿರುವ ಸೊತ್ತಿನ ಒಟ್ಟು ಮೌಲ್ಯ 4.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದೇವಾಲಯದ ಸಿಬ್ಬಂದಿ ಜಯ ಶೆಟ್ಟಿ ಎಂಬವರು ಶನಿವಾರ ಬೆಳಗ್ಗೆ ದೇವಾಲಯಕ್ಕೆ ಬಂದಾಗ ಈ ಕಳವು ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲಿನ ಬೀಗವನ್ನು ದೇವಸ್ಥಾನದ ಆವರಣದಲ್ಲಿ ಬಿಸಾಡಿರುವ ಕಳ್ಳರು ಸೊತ್ತುಗಳೊಂದಿಗೆ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ಎಎಸ್ಪಿ ರಿಷ್ಯಂತ್, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಅನಿಲ್ ಎಸ್. ಕುಲಕರ್ಣಿ, ಉಪ್ಪಿನಂಗಡಿ ಠಾಣಾಧಿಕಾರಿ ತಿಮ್ಮಪ್ಪ ನಾಯ್ಕ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ತಪಾಸಣೆಗೊಳಪಡಿಸಲಾಗಿದೆ. ದೇವಾಲಯದ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ನೀಡಿದ ದೂರನ್ನು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎರಡನೆ ಬಾರಿ ಕಳ್ಳತನ

ಎರಡು ವರ್ಷಕ್ಕೆ ಮೊದಲು ಇದೇ ದೇವಸ್ಥಾನದಲ್ಲಿ ಕಳವಾಗಿತ್ತು. ಆ ಸಂದರ್ಭ ಸುಮಾರು 60 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕದ್ದೊಯ್ಯಲಾಗಿತ್ತು. ಆದರೆ ಈತನಕವೂ ಕಳ್ಳರ ಪತ್ತೆ ಮಾತ್ರ ಸಾಧ್ಯವಾಗಿಲ್ಲ. ಆದರೆ, ಗ್ರಾಮಾಂತರ ಪ್ರದೇಶವಾಗಿರುವ ಕೊರಿಂಜದ ಇದೇ ದೇವಸ್ಥಾನದಲ್ಲಿ ಈಗ ಮತ್ತೊಮ್ಮೆ ಕಳವಾಗಿದೆ. ಎರಡು ವರ್ಷಗಳ ಹಿಂದೆ ನವರಾತ್ರಿಯ ಕೊನೆಯ ದಿನ ಇಲ್ಲಿ ಕಳವಾಗಿತ್ತು. ನವರಾತ್ರಿಯ ಕೊನೆಯ ದಿನ ರಾತ್ರಿ ಪೂಜೆ ಮುಗಿಯುವಾಗ ತಡವಾಗಿದ್ದರಿಂದ ಶ್ರೀ ದೇವಿಯ ವಿಗ್ರಹದಲ್ಲಿದ್ದ ಆಭರಣಗಳನ್ನು ಬೆಳಗ್ಗೆ ಬೇಗನೆ ಬಂದು ಈ ಆಭರಣವನ್ನು ತೆಗೆದು ಲಾಕರ್‌ನಲ್ಲಿಡುವ ಬಗ್ಗೆ ತೀರ್ಮಾನಿಸಿದ ದೇವಳದ ಆಡಳಿತ ಮಂಡಳಿಯವರು ದೇವಸ್ಥಾನಕ್ಕೆ ಬೀಗ ಹಾಕಿ ತೆರಳಿದ್ದರು. ಆದರೆ, ಮರುದಿನ ಬರುವಾಗ ಶ್ರೀ ದೇವಿಯ ಗುಡಿಯ ಬೀಗವನ್ನು ಮಾತ್ರ ಮುರಿದು ಅಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವುಗೈಯಲಾಗಿತ್ತು. ಈ ಸಂದರ್ಭ ಲಾಕರ್‌ನಲ್ಲಿ ಇನ್ನಷ್ಟು ಆಭರಣಗಳಿದ್ದರೂ ಅದನ್ನು ಮುಟ್ಟಿರಲಿಲ್ಲ. ಈ ಲಾಕರ್ ಮಾತ್ರ ಒಡೆದು ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಲಾಗಿದೆ.

ಕಳೆದ ಸಂಕ್ರಮಣ ಸಮಯದಲ್ಲಿ ಅದರಲ್ಲಿದ್ದ ಕಾಣಿಕೆ ಹಣವನ್ನು ತೆಗೆದಿರುವುದರಿಂದ ಹೆಚ್ಚಿನ ಹಣ ಕಳ್ಳರ ಪಾಲಾಗುವುದು ತಪ್ಪಿದೆ. ಆಭರಣವಿದ್ದಲ್ಲಿ ಮಾತ್ರ ಕನ್ನ ಹಾಕುವ ಕಳ್ಳರ ಕಾರ್ಯವೈಖರಿಯನ್ನು ನೋಡಿದರೆ, ದೇವಸ್ಥಾನದ ಬಗ್ಗೆ ಚೆನ್ನಾಗಿ ಬಲ್ಲ ಸ್ಥಳೀಯರಿಂದಲೇ ಕಳ್ಳರಿಗೆ ಮಾಹಿತಿ ದೊರೆತಿರುವ ಶಂಕೆ ವ್ಯಕ್ತವಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X