ಐವನ್ ನೇಮಕಕ್ಕೆ ಸಚಿವ ಖಾದರ್ ಹರ್ಷ

ಮಂಗಳೂರು, ಜು.2: ವಿಧಾನಪರಿಷತ್ತಿನಲ್ಲಿ ಸರಕಾರದ ಮುಖ್ಯ ಸಚೇತಕರನ್ನಾಗಿ ಐವನ್ ಡಿಸೋಜ ಅವರನ್ನು ನೇಮಕ ಮಾಡಿರುವುದಕ್ಕೆ ಆಹಾರ ಸಚಿವ ಯು.ಟಿ.ಖಾದರ್ ಸಂತಸ ವ್ಯಕ್ತಪಡಿಸಿದ್ದಾರೆ.
ಐವನ್ ನೇಮಕವು ಜಿಲ್ಲೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸಂದ ಗೌರವವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವ ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





