ಗಿಡ -ಮರ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಡಿಸಿ ಸತ್ಯಾವತಿ

ಚಿಕ್ಕಮಗಳೂರು, ಜು.2: ಗಿಡಮರಗಳನ್ನು ಬೆಳೆಸುವುದು ಮತ್ತು ಅವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಸತ್ಯಾವತಿ ಹೇಳಿದ್ದಾರೆ.ಅ
ಅವರು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೋಟಿ ವೃಕ್ಷ ಆಂದೋಲನ ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ನಿಸರ್ಗದ ನಿಯಮದ ಅನ್ವಯ ಭೂ ಭಾಗದ ಶೇ.33ರಷ್ಟು ಹಸಿರು ಹೊದಿಕೆ ಕಡ್ಡಾಯವಾಗಿದ್ದರೂ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಕಾಡನ್ನು ನಾಶ ಮಾಡುತ್ತಿರುವುದು ಸರಿ ಯಲ್ಲ ಎಂದರು.
ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸುವ ಮೂಲಕ ಪರಿಸರ ವನ್ನು ರಕ್ಷಿಸಬೇಕು. ಆ ಮೂಲಕ ಮುಂದಿನ ಪೀಳಿಗೆಯ ಜನರು ಭೂಮಿಯ ಮೇಲೆ ನೆಮ್ಮದಿ ಯಾಗಿ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.ಈ ನಿಟ್ಟಿನಲ್ಲಿ ಕೋಟಿ ವೃಕ್ಷ ಆಂದೋಲ ನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿ ಸಬೇಕು ಎಂದು ಮನವಿ ಮಾಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ರಾಗಪ್ರಿಯ ಮಾತನಾಡಿ, ನಿರಂತರವಾಗಿ ಅರಣ್ಯ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಉಷ್ಣಾಂಶದ ಪ್ರಮಾಣ ಈಗಾಗಲೇ ಎರಡು ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಇದರಿಂದಾಗಿ ವಿಶ್ವದೆಲ್ಲೆಡೆ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳು ಹೆಚ್ಚಾಗುತ್ತಿವೆ ಎಂದು ವಿಷಾದಿಸಿದರು.
ಜಿಪಂ ಅಧ್ಯಕ್ಷೆ ಚೈತ್ರಶ್ರೀಮಾಲತೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ನಗರದ ಸಾಂಕೇತ್ ಕಲಾ ತಂಡದ ರಮೇಶ್ ಬಂಗಾರಿ ಹಾಗೂ ಸಂಗಡಿಗರು ಪರಿಸರ ಸಂರಕ್ಷಣೆಯ ಕುರಿತು ಕಿರು ನಾಟಕ ಪ್ರದರ್ಶಿಸಿದರು. ಉಪ ವಿಭಾಗಾ ಧಿಕಾರಿ ಆರ್.ಸ್ನೇಹಲ್, ಕರವೇ ಅಧ್ಯಕ್ಷ ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.







