Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಆಯೋಗದ ಅಧ್ಯಕ್ಷರ ಭೇಟಿ

ಮಕ್ಕಳ ಆಯೋಗದ ಅಧ್ಯಕ್ಷರ ಭೇಟಿ

ವಾರ್ತಾಭಾರತಿವಾರ್ತಾಭಾರತಿ2 July 2016 11:49 PM IST
share

ಉಡುಪಿ, ಜು.2: ಇತ್ತೀಚೆಗೆ ಕುಂದಾಪುರ ತಾಲೂಕಿನ ತ್ರಾಸಿ ಸಮೀಪದ ಮೊವಾಡಿ ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತ ದಲ್ಲಿ ಮಡಿದ ಎಂಟು ಮಕ್ಕಳ ಮನೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಅಮರ್ ಆಳ್ವ ಅವರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರೊಂದಿಗೆ ಭೇಟಿ ನೀಡಿದರು.

ಇದೇ ಸಂದರ್ಭದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಮಕ್ಕಳನ್ನು ಭೇಟಿ ಮಾಡಿದರು. ನಾಲ್ಕೂವರೆ ವರ್ಷದ ಬಾಲಕಿ ಲೀಚೆಲ್ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇನ್ನೋರ್ವ ಬಾಲಕ ಆನ್ಸನ್‌ನನ್ನು ವಾರ್ಡ್‌ಗೆ ವರ್ಗಾಯಿಸಿದ್ದು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತಿದ್ದಾರೆ. ಉಳಿದೆಲ್ಲಾ ಮಕ್ಕಳು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ಈಗಾಗಲೇ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿರುವ ಆರು ಮಕ್ಕಳ ವೈದ್ಯಕೀಯ ವೆಚ್ಚವನ್ನು ಸರಕಾರದ ಮಟ್ಟದಲ್ಲಿ ಭರಿಸುವ ಬಗ್ಗೆ ಪ್ರಯತ್ನಿಸುವುದಾಗಿ ಕೃಪಾ ಆಳ್ವ ತಿಳಿಸಿದರು. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪೋಷಕರು ವಾಹನ ಸಂಚಾರಕ್ಕೆ ಸೂಕ್ತವಾದ ಮಾರ್ಗ ಇದ್ದರೂ ಎರಡು ವರ್ಷಗಳಿಂದ ಶಾಲಾ ವಾಹನದ ವ್ಯವಸ್ಥೆ ಇಲ್ಲದಿರು ವುದರಿಂದ ಖಾಸಗಿ ವಾಹನವನ್ನು ಅವಲಂಬಿಸಿ ಮಕ್ಕಳನ್ನು ಕಳೆದುಕೊಳ್ಳಬೇಕಾದ ಪ್ರಸಂಗ ಒದಗಿರುವುದಾಗಿ ತಮ್ಮ ಅಳಲನ್ನು ತೋಡಿಕೊಂಡರು. ಎಲ್ಲಾ ಶಾಲೆಗಳಲ್ಲಿ ಶಾಲಾ ವಾಹನದ ವ್ಯವಸ್ಥೆ ಮಾಡುವಂತೆ ಸರಕಾರದಿಂದ ಪ್ರಯತ್ನಿಸುವ ಭರವಸೆಯನ್ನು ಆಳ್ವ ನೀಡಿದರು. ಇನ್ನು ಮುಂದೆ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ತಿಳಿಸುವುದಾಗಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X