Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಯುಶ್...

ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಯುಶ್ ಆಸ್ಪತ್ರೆ ಮಂಜೂರಾಗಿರುವುದು ತೃಪ್ತಿ ನೀಡಿದೆ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ3 July 2016 8:31 PM IST
share
ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಯುಶ್ ಆಸ್ಪತ್ರೆ ಮಂಜೂರಾಗಿರುವುದು ತೃಪ್ತಿ ನೀಡಿದೆ: ಸಚಿವ ಯು.ಟಿ.ಖಾದರ್

ಮಂಗಳೂರು,ಜು.3: ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಯುಶ್ ಆಸ್ಪತ್ರೆ ಆರಂಭಿಸಲು ಅನುಮತಿ ನೀಡಿರುವುದು ಆರೋಗ್ಯ ಸಚಿವನಾಗಿ ತೃಪ್ತಿ ನೀಡಿದೆ. ಆಹಾರ ಇಲಾಖೆಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ನನ್ನ ಮುಂದಿನ ಗುರಿಯಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಇಂದು ನಗರದ ವೆನ್‌ಲಾಕ್ ಆವರಣದಲ್ಲಿ ಆಯುಷ್ ಫೌಂಡೇಶನ್ ವತಿಯಿಂದ ವೈದ್ಯರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ವೈದ್ಯರ ಮತ್ತು ಪ್ರತಿಭಾವಂತ ಯುವ ವೈದ್ಯರ ಸನ್ಮಾನ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ ದೇಶದಲ್ಲಿಯೆ ಪ್ರಥಮ ಬಾರಿಗೆ 50 ಬೆಡ್‌ಗಳ ಆಯುಶ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಶೀಘ್ರದಲ್ಲಿ ಕಾರ್ಯ ಆರಂಭಿಸಲಿದೆ.ಈಗಾಗಲೆ ಈ ವಿಭಾಗಕ್ಕೆ ವೈದ್ಯರ ನೇಮಕಾತಿಗೆ ಸರಕಾರ ಆದೇಶ ನೀಡಿದೆ. ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಜನರ ನಿರೀಕ್ಷೆಯಂತೆ ಇಲ್ಲೊಂದು ಆರ್ಯುವೇದ, ಯುನಾನಿ, ಹೋಮಿಯೋಪತಿಯನ್ನೊಳಗೊಂಡ ಆಯುಶ್ ಆಸ್ಪತ್ರೆ ಆಗಬೇಕೆಂದು ಆಶಿಸಿದ್ದೆ. ಸರಕಾರದ ವತಿಯಿಂದ ಈ ಕೆಲಸ ನಡೆಸಲು ಸಾಧ್ಯವಾಗಿರುವುದು ನನಗೆ ತೃಪ್ತಿ ನೀಡಿದೆ. ಮುಂದಿನ ದಿನಗಳಲ್ಲಿಯೂ ಜಿಲ್ಲೆಯಲ್ಲಿ ಆಯುಶ್ ಆಸ್ಪತ್ರೆಗಳಿಗೆ ಜನರ ಬೆಂಬಲ ದೊರೆಯಲಿದೆ ಎನ್ನುವ ವಿಶ್ವಾಸ ತನಗಿರುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಆರೊಗ್ಯ-ಆಹಾರ ಇಲಾಖೆಗಳು ಪರಸ್ಪರ ಪೂರಕ

ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಯಾದ ಬಳಿಕ ಆರೋಗ್ಯ ಸಚಿವ ಯು.ಟಿ.ಖಾದರ್ ಆಹಾರ ಮತ್ತು ನಾಗರಿಕ ಪೂರೈಕೆಯ ಸಚಿವರಾಗಿ ಬದಲಾವಣೆ ಹೊಂದಿದ್ದರೂ ಈ ರೀತಿಯ ಖಾತೆ ಬದಲಾವಣೆಯಿಂದ ತನಗೆ ಯಾವುದೇ ಬೇಸರವಾಗಿಲ್ಲ. ಜನರಿಗೆ ಇನ್ನೂ ಹತ್ತಿರವಾಗಿ ಕೆಲಸ ಮಾಡಬೇಕೆನ್ನುವುದು ನನ್ನ ಇಂಗಿತವಾಗಿತ್ತು. ಹಿಂದಿನ ಖಾತೆಗೂ ಪ್ರಸಕ್ತ ವಹಿಸಿಕೊಂಡಿರುವ ಖಾತೆ ಪರಸ್ಪರ ನಿಕಟ ಸಂಬಂಧವಿದೆ.

ಜನರಿಗೆ ಉತ್ತಮ ಆಹಾರ ದೊರೆತರೆ ಅವರಿಗೆ ಅನಾರೋಗ್ಯದ ಸಮಸ್ಯೆ ಇರುವುದಿಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಜನಸಾಮಾನ್ಯರಿಗೆ ಸಹಾಯವಾಗುವ ಸಾಕಷ್ಟು ಕೆಲಸ ಮಾಡಲು ಸಾಧ್ಯವಿದೆ. ಆದ್ದರಿಂದ ಹಾಲಿ ಖಾತೆಯ ಬಗ್ಗೆಯೂ ನನಗೆ ಮೆಚ್ಚುಗೆಯಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಸಮಾರಂಭದಲ್ಲಿ ಆಯುಶ್ ಫೌಂಡೇಶನ್ನಿನ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಸ್ವಾಗತಿಸಿದರು. ನಿಟ್ಟೆ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ.ರಮಾನಂದ ಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಾ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ, ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್, ಜಿಲ್ಲಾ ಆಯುಶ್ ಅಧಿಕಾರಿ ಡಾ.ಮುಹಮ್ಮದ್ ಇಕ್ಭಾಲ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ವೈದ್ಯರಾದ ಡಾ.ರಾಮಾನುಜಂ, ವಿಷ್ಣು ಮೂರ್ತಿ ಶರ್ಮ, ಡಾ.ಶ್ರೀಕೃಷ್ಣ ಭಟ್ ಬೆಟ್ಟಂಪಾಡಿ, ಎಂ.ಎಸ್.ಭಟ್ ಬಂಟ್ವಾಳ, ಡಾ.ಹರಿಪ್ರಕಾಶ್ ಸುಳ್ಯ, ಡಾ.ಶ್ರೀಪತಿ ಭಟ್ ಉಡುಪಿ, ಡಾ.ಶ್ರೀನಿವಾಸ ಶೆಟ್ಟಿ ಕುಂದಾಪುರ, ಡಾ.ಸುನಂದ ಪೈ, ಡಾ.ಪ್ರಶಾಂತ್ ಶೆಟ್ಟಿ, ಡಾ.ಸನ್ನಿ ಮಾಥ್ಯು, ಡಾ.ಕೆ.ಎಸ್.ಐತಾಳ್, ಆಯುಶ್ ಇಲಾಖೆಯ ಡಾ.ಸೈಯದ್ ಝಾಹಿದ್ ಹುಸೈನ್, ಡಾ.ಮುಹಮ್ಮದ್ ಇಕ್ಭಾಲ್ ಹಾಗೂ ಯುವ ವೈದ್ಯರಾದ ಡಾ.ರಿಯಾ, ಡಾ.ಕೀರ್ತನಾ, ಡಾ.ಅಂಜು ಮಹಾಜನ್ ಮೊದಲಾದವರನ್ನು ಸಮಾರಂಭದಲ್ಲಿ ಅತಿಥಿಗಳು ಸ್ಮರಣಿಕೆ ನೀಡಿ ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X