Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಯೆಟ್ನಾಂನಲ್ಲಿ ವಿಶ್ವ ದಾಖಲೆ ಬರೆದ...

ವಿಯೆಟ್ನಾಂನಲ್ಲಿ ವಿಶ್ವ ದಾಖಲೆ ಬರೆದ ಕೊಡಗಿನ ಚೆರಿಯಮನೆ ಸಂತೋಷ್

ವಾರ್ತಾಭಾರತಿವಾರ್ತಾಭಾರತಿ3 July 2016 11:24 PM IST
share
ವಿಯೆಟ್ನಾಂನಲ್ಲಿ ವಿಶ್ವ ದಾಖಲೆ ಬರೆದ ಕೊಡಗಿನ ಚೆರಿಯಮನೆ ಸಂತೋಷ್

ಮಡಿಕೇರಿ ಜು.3: ಕೊಡಗು ಮೂಲದ ಚೆರಿಯಮನೆ ಸಂತೋಷ್ ನೇತೃತ್ವದ ತಂಡ ವಿಯೆಟ್ನಾಂನಲ್ಲಿ ಸತತ 7, 777 ಆವರ್ತ ಸೂರ್ಯ ನಮಸ್ಕಾರಗಳನ್ನು ಮಾಡಿ, ಪ್ರತಿ ಆವರ್ತದಲ್ಲಿ 10 ಯೋಗಾಸನಗಳಂತೆ ಒಟ್ಟು 77,770 ಆಸನಗಳನ್ನು ನಿರಂತರವಾಗಿ 60 ಗಂಟೆ 06 ನಿಮಿಷ 06 ಸೆಕೆಂಡ್ ಮಾಡುವ ಮೂಲಕ ವಿಶ್ವ ದಾಖಲೆಯ ಸಾಧನೆ ಮಾಡಿದ್ದಾರೆ.

ಹಿಂದೆ ಭಾರತದ ಯೋಗರಾಜ್ ಸತತ 40 ಗಂಟೆ 15 ನಿಮಿಷಗಳ ಯೋಗಾಸನದ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದರು. ಇದನ್ನು ನೇಪಾಳದ ಯೋಗ ಶಿಕ್ಷಕ ಉತ್ತಮ್ ಯೋಗಿ ಅವರು 50 ಗಂಟೆ 15 ನಿಮಿಷಗಳ ಕಾಲ ಯೋಗ ಮಾಡುವುದರ ಮೂಲಕ ಹಳೆಯ ದಾಖಲೆಯನ್ನು ಅಳಿಸಿದ್ದರು. ಇದೀಗ ಚೆರಿಯಮನೆ ಸಂತೋಷ್ ಈ ಇಬ್ಬರ ದಾಖಲೆಯನ್ನು ಮುರಿದು ನೂತನ ದಾಖಲೆ ಬರೆದಿದ್ದಾರೆ.

 ಮೈಸೂರಿನಲ್ಲಿ ವಿದ್ಯಾಭ್ಯಾಸವನ್ನು ಪಡೆದು ಇಂಜಿಯನಿಯರಿಂಗ್ ಶಿಕ್ಷಣವನ್ನು ವರ್ಷದಲ್ಲಿ ಮೊಟಕುಗೊಳಿಸಿ ಯೋಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡ ಅವರು, ಕನಕಪುರದ ಸಮೀಪ ಶಾಂತಿಧಾಮಕ್ಕೆ ಸೇರಿ ಯೋಗ ಶಿಕ್ಷಕರಾಗಿ ತನ್ನ ಪ್ರತಿಭೆಯನ್ನು ಕೆಲಕಾಲ ಸವೆಸಿದರು.

ಮೈಸೂರಿನ ವೇದವ್ಯಾಸ ಪ್ರತಿಷ್ಠಾನದ ವೇದ ಗುರು ರಾಘವೇಂದ್ರ ಪೈ ಅವರ ಮಾರ್ಗದರ್ಶನದ ಮೂಲಕ ವಿಯೆಟ್ನಾಂಗೆ ತೆರಳಿದ್ದ ಸಂತೋಷ್ ಕೇವಲ ಮೂರು ವರ್ಷಗಳಲ್ಲಿ ತನ್ನ ಯೋಗದ ಮೂಲಕ ಸಂಸ್ಥೆಯೊಂದರ ಸ್ಥಾಪನೆಗೆ ಕಾರಣರಾದರು.

ವಿಯೆಟ್ನಾಂನಲ್ಲಿ ಓಂ ಯೋಗಾ ವೆಲ್ನೆಸ್ ಹಬ್ ಎಂಬ ಸಂಸ್ಥೆಯ ಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಯೆಟ್ನಾಂ ಪ್ರಧಾನಿಯೇ ಇವರನ್ನು ಮೆಚ್ಚಿ ಪ್ರಶಂಶೆ ನೀಡಿದ್ದಾರೆ.ಅವರ ಸಾಧನೆಯ ಮುಂದುವರಿದ ದಾಖಲೆಯ ಆಯಾಮಗಳಾಗಿ ಏಷ್ಯ ಬುಕ್ ಆಫ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗಳೂ ಅವರ ಜೋಳಿಗೆಯಲ್ಲಿವೆ. ಅನೇಕ ಸಾಧನೆಗಳನ್ನು ಭವಿಷ್ಯದಲ್ಲಿ ಮಾಡಲು ಹೊರಟಿರುವ ಸಂತೋಷ್ ಕುಮಾರ್ ನಮ್ಮ ರಾಜ್ಯದ ರಾಜಕಾರಣಿಗಳಿಂದ ಹಿಡಿದು ದಸರಾ ಆನೆಗಳನ್ನು ಸಾಕುವ ಕಾವಾಡಿಗಳಿಗೂ ಯೋಗ ಶಿಕ್ಷಣ ನೀಡಿದ್ದಾರೆ ಎನ್ನುವುದು ವಿಶೇಷ.

 ಮೈಸೂರು ಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಅನೇಕ ಯೋಗ ಪ್ರದರ್ಶನಗಳನ್ನು ಇವರು ನೀಡಿದ್ದಾರೆ. ವಿಯೆಟ್ನಾಂಮ್‌ನ ಭಾಷೆ, ಸಂಸ್ಕೃತಿಯೊಂದಿಗೆ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಯೋಗವನ್ನು ಸಮೀಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X