ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಉಡುಪಿ, ಜು.3: ಅಂಬಲ್ಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.2ರಂದು ರಾತ್ರಿ 8:40ಕ್ಕೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್‌ನಲ್ಲಿ ಕಡೆಕಾರಿನಿಂದ ಉಡುಪಿಗೆ ಹೋಗಲು ಅಂಬಲಪಾಡಿ ಜಂಕ್ಷನ್‌ನಲ್ಲಿ ದಾಟುತ್ತಿದ್ದಾಗ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





