Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ನಿಷೇಧ:...

ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ನಿಷೇಧ: ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 July 2016 12:28 AM IST
share

ಮಂಗಳೂರು, ಜು.3: ಭಾರತದ ರಾಷ್ಟ್ರಧ್ವಜವನ್ನು ರಾಷ್ಟ್ರೀಯ ಹಬ್ಬ ಗಳಲ್ಲಿ ಹಾಗೂ ಮತ್ತಿತರ ಸರಕಾರಿ ಸಮಾರಂಭಗಳಲ್ಲಿ ಆರೋಹಣ ಮಾಡುವುದು ಮತ್ತು ರಾಷ್ಟ್ರಗೀತೆಯೊಂದಿಗೆ ಧ್ವಜವನ್ನು ಗೌರವಿಸುವುದು ರಾಷ್ಟ್ರಭಕ್ತಿಗಳನ್ನೊಳಗೊಂಡ ಸಂಪ್ರದಾಯವಾಗಿದೆ. ಆದ್ದರಿಂದ ಸಾರ್ವಜನಿಕರು ಧ್ವಜದ ಪ್ರಾಮುಖ್ಯತೆ ಅರಿತು, ಗೌರವಪೂರ್ವಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.

ಆದರೆ ರಾಷ್ಟ್ರಧ್ವಜಗಳನ್ನು ಕಿರಿಯರು ಹಿರಿಯರು ಎನ್ನದೆ ಬಳಸುವುದು ಮತ್ತು ಬಳಸಿದ ಧ್ವಜಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದು ಕಂಡು ಬರುತ್ತಿದೆ. ಈ ರೀತಿ ಎಸೆಯಲ್ಪಟ್ಟ ಧ್ವಜಗಳು ಜನಸಾಮಾನ್ಯರ ಕಾಲ್ತುಳಿತಕ್ಕೆ ಒಳಗಾಗುವುದು. ರಸ್ತೆ ಬದಿ ಚರಂಡಿಗಳಲ್ಲಿ ಕಂಡು ಬರುವುದು ಶೋಚ ನೀಯ. ಇದು ರಾಷ್ಟ್ರ ಮತ್ತು ರಾಷ್ಟ್ರಧ್ವಜಕ್ಕೆ ಮಾಡುವ ಅಪಮಾನವಾಗಿದ್ದು, ಇದನ್ನು ಅಕ್ಷಮ್ಯ ಅಪರಾಧ ಎಂದು ಪರಿಗಣಿಸಬೇಕಾಗುತ್ತದೆ.

ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮನಬಂದಂತೆ ಬಳಸಿ, ಎಲ್ಲೆಂದರಲ್ಲಿ ವಿಲೇ ಮಾಡುವುದು ಮತ್ತು ಈ ಮೂಲಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಷ್ಟಧ್ವಜಕ್ಕೆ ಅವಮಾನ ಹಾಗೂ ಅಗೌರವ ತೋರುವುದನ್ನು ತಡೆಗಟ್ಟಬೇಕಿದೆ. ಅಲ್ಲದೇ, ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕಾರವಾಗುವುದರಿಂದ, ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಲ್ಲಿ, ಪೇಪರ್‌ನಿಂದ ಮಾಡಿದ ರಾಷ್ಟ್ರಧ್ವಜಗಳನ್ನು ಮಾತ್ರ ಬಳಸುವಂತೆ ಮತ್ತು ಕಾರ್ಯಕ್ರಮ ಮುಗಿದ ನಂತರ ಅವುಗಳನ್ನು ನೆಲದ ಮೇಲೆ ಎಲ್ಲೆಂದರಲ್ಲಿ ಎಸೆಯಬಾರದು.
ಹಾನಿಗೊಂಡ, ಹಳೆಯದಾಗಿರುವ ರಾಷ್ಟ್ರ ಧ್ವಜವನ್ನು ಗೌರವಪೂರ್ವಕ ವಾಗಿ ಖಾಸಗಿಯಾಗಿ ಸುಟ್ಟು ನಾಶಗೊಳಿಸಬೇಕು. ಇದರ ಹೊರತಾಗಿ ಬೇರೆ ಯಾವುದೇ ರೀತಿಯಲ್ಲಿ ವಿಲೇ ಮಾಡಬಾರದು. ರಾಷ್ಟ್ರಧ್ವಜ ಮತ್ತು ರಾಷ್ಟ್ರದ ಲಾಂಛನವನ್ನು ನಾಶಗೊಳಿಸುವ ಅವಮಾನಿಸುವ ಅಥವಾ ಧ್ವಜ ನಿಯಮಗಳನ್ನು ಉಲ್ಲಂಘಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X