ಜಿದ್ದಾದ ಅಮೆರಿಕ ರಾಯಭಾರಿ ಕಚೇರಿ ಬಳಿ ಆತ್ಮಾಹುತಿ ಬಾಂಬ್ ದಾಳಿ; ಓರ್ವ ಸಾವು, ಇಬ್ಬರಿಗೆ ಗಾಯ

ಜಿದ್ದಾ, ಜು.4: ಇಲ್ಲಿನ ಅಮೆರಿಕದ ರಾಯಭಾರಿ ಕಚೇರಿ ಬಳಿ ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಓರ್ವ ಮೃತಪಟ್ಟು, ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ.
ಸೋಮವಾರ ಅಮೆರಿಕದ ರಾಯಭಾರ ಕಚೇರಿ ಸಮೀಪದ ಡಾ.ಸುಲೈಮಾನ್ ಫಕೀಹ್ ಆಸ್ಪತ್ರೆಯ ಬಳಿ ಅನುಮಾನಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬ ಆತ್ಮಾಹುತಿ ಬಾಂಬ್ ಸ್ಫೋಟಿಸಿ ತಾನು ಸಾವಿಗೀಡಾದನು. ಇಬ್ಬರು ಅಧಿಕಾರಿಗಳು ಗಾಯಗೊಂಡರು ಎಂದು ತಿಳಿದು ಬಂದಿದೆ.
ಅಮೆರಿಕದ ಜನತೆ ಸ್ವಾತಂತ್ರ‍್ಯ ದಿನಾಚರಣೆಯ ಸಡಗರದಲ್ಲಿರುವಾಗಲೇ ಈ ಘಟನೆ ನಡೆದಿದೆ.
Next Story





