Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾ.ಹೆದ್ದಾರಿಯಲ್ಲಿ ಅನಧಿಕೃತ ಕಟ್ಟಡ,...

ರಾ.ಹೆದ್ದಾರಿಯಲ್ಲಿ ಅನಧಿಕೃತ ಕಟ್ಟಡ, ಅಂಗಡಿ ತಕ್ಷಣ ತೆರವು

ಅಧಿಕಾರಿಗಳಿಗೆ ಸಂಸದ ನಳಿನ್ ತಾಕೀತು

ವಾರ್ತಾಭಾರತಿವಾರ್ತಾಭಾರತಿ4 July 2016 3:37 PM IST
share
ರಾ.ಹೆದ್ದಾರಿಯಲ್ಲಿ ಅನಧಿಕೃತ ಕಟ್ಟಡ, ಅಂಗಡಿ ತಕ್ಷಣ ತೆರವು

ಮಂಗಳೂರು,ಜು.4: ದ.ಕ. ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅನಧಿಕೃತ ಕಟ್ಟಡಗಳು, ಅಂಗಡಿಗಳು ಸಂಚಾರಿ ಕ್ಯಾಂಟೀನ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಹೆದ್ದಾರಿ ಬದಿಗಳಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಟ್ಟಡ ಸಾಮಗ್ರಿಗಳನ್ನು ರಾಶಿ ಹಾಕಿದವರ ಮೇಲೆ ಪ್ರಕರಣ ದಾಖಲಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳವರು ಯಾವುದೇ ಕಾರಣಕ್ಕೂ ಬಸ್ಸು ನಿಲ್ದಾಣಗಳನ್ನೂ ನಿರ್ಮಾಣ ಮಾಡುವಂತಿಲ್ಲ. ಅಂತಹದ್ದು ಇದ್ದಲ್ಲಿ ತಕ್ಷಣ ತೆರವುಗೊಳಿಸಬೇಕು. ಸಂಚಾರಿ ಕ್ಯಾಂಟೀನ್‌ಗಳು, ಅಂಗಡಿಗಳು ಹೆದ್ದಾರಿ ಅಕ್ಕಪಕ್ಕಗಳಲ್ಲಿ ಗರಿಷ್ಠ 1 ಗಂಟೆಗಿಂತ ಹೆಚ್ಚು ಹೊತ್ತು ತಂಗ ಬಾರದು. ಮಾತ್ರವಲ್ಲದೆ, ಯಾವುದೇ ಅನಧಿಕೃತ ಬೋರ್ಡ್‌ಗಳು, ಹೋರ್ಡಿಂಗ್‌ಗಳು ಇದ್ದಲ್ಲಿ ತಕ್ಷಣ ತೆರವುಗೊಳಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಪರಿಹಾರ ಮೊತ್ತಕ್ಕೆ ಅನುದಾನದ ಕೊರತೆ: ಕುಮಾರ್
ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಭೂಮಿ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಪ್ರತಿ ಗುರುವಾರ ವಿಶೇಷ ಕಂದಾಯ ಅದಾಲತ್ ನಡೆಸಲಾಗುತ್ತಿದೆ. ಹೆದ್ದಾರಿ ಇಲಾಖೆಯಿಂದ ಸಾಕಷ್ಟು ಅನುದಾನದ ಕೊರತೆಯಿಂದ ಪರಿಹಾರ ಒದಗಿಸಲು ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಿಂದ ಇಲಾಖೆಗೆ ಪತ್ರ ಬರೆಯಲಾಗಿದ್ದರೂ ಯಾವುದೇ ಉತ್ತರ ಬಂದಿಲ್ಲ. ವಿಶೇಷ ಕಂದಾ ಅದಾಲತ್‌ಗೆ ಪ್ರತ್ಯೇಕ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಗ್ರಾಮವಾರು ಅದಾಲತ್ ನಡೆಸಿ ಕ್ರಮ ಕೈಗೊಳ್ಳುವಾಗ ಅನುದಾನ ಇಲ್ಲದೆ ಜನರಿಗೆ ತೊಂದರೆಯಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಸಭೆಯಲ್ಲಿ ತಿಳಿಸಿದರು.
ತಕ್ಷಣ ಅನುದಾನದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಅಧಿಕಾರಿಗಳಿಗೆ ಸೂಚಿಸಿದರು.

ಕೆಂಪು ಕಲ್ಲಿನ ಕೋರೆಗಳಿಗೆ ಬೇಲಿ: 47 ಲಕ್ಷ ರೂ. ದಂಡ ಸಂಗ್ರಹ
ಕೆಂಪು ಕಲ್ಲಿನ ಕೋರೆಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿ ಅನಾಹುತ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಒದಗಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದರೂ ಬಹುತೇಕ ಕಡೆಗಳಲ್ಲಿ ಕ್ರಮ ಕೈಗೊಳ್ಳದಿರುವುದು ತನ್ನ ಗಮನಕ್ಕೆ ಬಂದಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

 ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ನಾಗೇಂದ್ರಪ್ಪ, ಜಿಲ್ಲೆಯಲ್ಲಿ 38 ಕೆಂಪು ಕಲ್ಲಿನ ಗುತ್ತಿಗೆದಾರರಿದ್ದು, 800 ಕಲ್ಲು ಗುಂಡಿಗಳನ್ನು ಗುರುತಿಸಲಾಗಿದೆ. ಅದರಲ್ಲಿ 400ಕ್ಕೂ ಅಧಿಕ ಕಲ್ಲು ಗುಂಡಿಗಳ ಸುತ್ತ ಬೇಲಿ ವ್ಯವಸ್ಥೆ ಆಗಿದೆ. ಉಳಿದಂತೆ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಕಲ್ಲುಕೋರೆಗಳಿಗೆ ಸಂಬಂಧಿಸಿ 47 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದರು.

ಪಂಚಾಯತ್ ಮಟ್ಟದಲ್ಲಿ ಕೆಂಪು ಕಲ್ಲಿನ ಕೋರೆಗಳನ್ನು ಹುಡುಕಿ ಭದ್ರತಾ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಅನಾಹುತ ಸಂಭವಿಸಿದಾಗ ಸ್ಥಳೀಯ ಪಂಚಾಯತ್‌ಗಳನ್ನೇ ಹೊಣೆಗಾರನ್ನಾಗಿಸಬೇಕು ಎಂದು ಸಂಸದ ನಳಿನ್ ಸಲಹೆ ನೀಡಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲೆಯಲ್ಲಿರುವ ಕೆಂಪು ಕಲ್ಲುಗುಂಡಿಗಳನ್ನು ಈಗಾಗಲೇ ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ. ಆದರೆ ಬೇಲಿ ಹಾಕಲು ಸಂಬಂಧಪಟ್ಟ ಇಲಾಖೆಯಲ್ಲಿ ಸಂಪನ್ಮೂಲ ಇಲ್ಲದಿರುವುದರಿಂದ ಗುತ್ತಿಗೆದಾರರೇ ಜವಾಬ್ಧಾರಿ ವಹಿಸಬೇಕು ಎಂದರು.ಮುದ್ರಾ ಯೋಜನೆ: 37273 ಖಾತೆ

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 37273 ಖಾತೆಗಳನ್ನು ತೆರೆಯಲಾಗಿದ್ದು, 497 ಕೋಟಿ ರೂ.ಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್‌ನ ಅಧಿಕಾರಿ ಸಭೆಯಲ್ಲಿ ತಿಳಿಸಿದರು.

ಯಾವುದೇ ಕಾರಣಕ್ಕೂ ಮುದ್ರಾ ಯೋಜನೆಯಡಿ ಸಾಲ ಸಲ್ಲಿಸುವ ಅರ್ಜಿದಾರರಿಗೆ ಸಾಲವನ್ನು ನಿರಾಕರಿಸಬಾರದು ಎಂದು ಸಂಸದ ನಳಿನ್ ತಾಕೀತು ಮಾಡಿದರು.

ಬಳ್ಪ ಆದರ್ಶ ಗ್ರಾಮದಲ್ಲಿ ಹಂತ ಹಂತದ ಅಭಿವೃದ್ಧಿ

ಸಂಸದ ಆದರ್ಶ ಗ್ರಾಮವಾದ ಬಳ್ಪದಲ್ಲಿ ಅಧಿಕಾರಿಗಳ ಮುತುವರ್ಜಿಯಿಂದ ಸಾಕಷ್ಟು ಅಭಿವೃದ್ಧಿ ಕೆಲಸ ಆಗುತ್ತಿರುವುದು ಸಂತಸದ ವಿಚಾರವಾದರೂ ಅಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯ ಅಶೋಕ್ ಬೇಸರ ವ್ಯಕ್ತಪಡಿಸಿದರು.

ಸಿಂಡಿಕೇಟ್ ಬ್ಯಾಂಕ್‌ನ ಶಾಖೆ ತೆರೆದು 600ರಷ್ಟು ಖಾತೆಗಳನ್ನು ತೆರೆಯಲಾಗಿದೆ. ಆದರೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಬಗ್ಗೆ ಅಲ್ಲಿನ ಜನರಿಗೆ ಮಾಹಿತಿ ನೀಡುವ ತಿಳಿಸುವ ಕಾರ್ಯ ಅಗಿಲ್ಲ. ಈ ಬಗ್ಗೆ ಬ್ಯಾಂಕ್‌ನಲ್ಲಿ ವಿಚಾರಿಸಿದರೆ, 2 ಅರ್ಜಿಗಳು ಬಂದಿವೆ ಪರಿಶೀಲನೆಯಲ್ಲಿವೆ ಎಂದು ಹೇಳುತ್ತಿದ್ದಾರೆ. ಈ ತೆರನಾದ ಆಮೆನಡಿಗೆಯ ಮನೋಭಾವದಿಂದ ಇಲಾಖೆ ಹೊರಬರಬೇಕಿದೆ. ಬಳ್ಪ ಮತ್ತು ಕೇನ್ಯ ಎರಡು ಗ್ರಾಮಗಳಲ್ಲಿ ಒಟ್ಟು 7 ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲನಿಗಳಿದ್ದು, ಅವು ಸಂಪೂರ್ಣ ಕೊಳಚೆಗೇರಿ ಪ್ರದೇಶದ ರೂಪದಲ್ಲಿದೆ. ಯೋಜನೆಯಡಿ ಒಂದೇ ಒಂದು ಕಾಲನಿಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಕಲ್ಪನೆಯೇ ಆಗಿಲ್ಲ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರತಿಕ್ರಿಯಿಸಿದ ಸಂಸದ ನಳಿನ್, ಆದರ್ಶ ಗ್ರಾಮ ಯೋಜನೆಗೆ ಕೇಂದ್ರ ಸರಕಾರದಿಂದ ಯಾವುದೇ ನೇರ ಅನುದಾನವಿಲ್ಲ. ಖಾಸಗಿಯವರ ಕೊಡುಗೆಯೊಂದಿಗೆ 20 ಕೋಟಿ ರೂ.ಗಳಲ್ಲಿ ಹಂತ ಹಂತವಾಗಿ ಐದು ವರ್ಷಗಳಲ್ಲಿ ಆದರ್ಶ ಗ್ರಾಮ ನಿರ್ಮಾಣವಾಗಲಿದೆ. ಪ್ರಥಮ ಹಂತದಲ್ಲಿ ರಸ್ತೆ, ಆಸ್ಪತ್ರೆ ಹಾಗೂ ಶಾಲೆಗಳ ಕಾಮಗಾರಿಯನ್ನು ಕೈಗೆತ್ತಿ ಪೂರ್ಣಗೊಳಿಸಲಾಗಿದೆ. ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ತೃತೀಯ ಹಾಗೂ ಚತುರ್ಥ ಹಂತದಲ್ಲಿ ಕಾಲನಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂದರ್ಭ ಎಂಟು ಹುಲ್ಲಿನ ಮನೆಗಳನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ಕೊಳಚೆಗೇರಿಗಳ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಸ್ಪಷ್ಟನೆ ನೀಡಿದರು.

ಜಿಲ್ಲಾ ಮಟ್ಟದ ಸಭೆಗಳಲ್ಲಿ ಮಾಹಿತಿ ಸ್ಪಷ್ಟವಾಗಿರಲಿ: ಅಧಿಕಾರಿಗಳಿಗೆ ಎಚ್ಚರಿಕೆ
ಜಿಲ್ಲೆಯಲ್ಲಿ ಡೆಂಗ್ ಹಾಗೂ ಮಲೇರಿಯಾ ರೋಗಗಳ ಸಮಸ್ಯೆ ಕುರಿತ ಚರ್ಚೆಯ ಡೆಂಗ್ ರೋಗಕ್ಕೆ ಸಂಬಂಧಿಸಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಕಿಟ್ ಇಲ್ಲವೆಂಬ ದೂರು ಬರುತ್ತಿದೆಯಲ್ಲಾ ಎಂದು ಸಂಸದ ನಳಿನ್ ಪ್ರಶ್ನಿಸಿದಾಗ, ಈ ಬಗ್ಗೆ ವಿಚಾರಿಸುವುದಾಗಿ ಅಧಿಕಾರಿ ಹಾರಿಕೆಯ ಉತ್ತರ ನೀಡಿದರು. ಇದರಿಂದ ಅಸಮಾಧಾನ ಗೊಂಡ ಸಂಸದ ನಳಿನ್, ಜಿಲ್ಲಾ ಮಟ್ಟದ ಕೆಡಿಪಿ ಹಾಗೂ ಜಾಗೃತ ಸಮಿತಿಯಂತಹ ಸಭೆಗಳಿಗೆ ಅಧಿಕಾರಿಗಳು ಅಧ್ಯಯನ ಮಾಡಿ ಪೂರಕ ಮಾಹಿತಿಗಳೊಂದಿಗೆ ಹಾಜರಾಗಬೇಕು. ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಸಭೆ ನಡೆಸಲಾಗುತ್ತದೆ. ಅಧಿಕಾರಿಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಿರಬೇಕು ಎಂದು ಎಚ್ಚರಿಕೆ ನೀಡಿದರು.

ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ, ಪ್ರಯೋಗಾಲಯ ತಂತ್ರಜ್ಞರ ಕೊರತೆ ಇರುವಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ತಂತ್ರಜ್ಞರನ್ನು ನೇಮಕಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X