Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಪರೀಕ್ಷೆ ವಂಚನೆ ಪ್ರಕರಣ: ಕ್ಲಾಸ್...

ಬಿಹಾರ ಪರೀಕ್ಷೆ ವಂಚನೆ ಪ್ರಕರಣ: ಕ್ಲಾಸ್ 12 ‘ಟಾಪರ್’ ಅಪ್ರಾಪ್ತ ವಯಸ್ಕೆ ಎಂಬ ವಾದ ಒಪ್ಪಿಕೊಂಡ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ4 July 2016 7:36 PM IST
share
ಬಿಹಾರ ಪರೀಕ್ಷೆ ವಂಚನೆ ಪ್ರಕರಣ: ಕ್ಲಾಸ್ 12 ‘ಟಾಪರ್’ ಅಪ್ರಾಪ್ತ ವಯಸ್ಕೆ ಎಂಬ ವಾದ ಒಪ್ಪಿಕೊಂಡ ನ್ಯಾಯಾಲಯ

 ಪಟ್ನಾ,ಜು.4: ಪರೀಕ್ಷೆ ವಂಚನೆ ಜಾಲಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಹಾರ ಇಂಟರ್‌ಮೀಡಿಯೇಟ್ ಪರೀಕ್ಷೆಯ ‘ಅಗ್ರಸ್ಥಾನಿ’ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಕಳು ಎನ್ನುವುದನ್ನು ಇಲ್ಲಿಯ ಜಿಲ್ಲಾ ನ್ಯಾಯಾಲಯವು ಸೋಮವಾರ ಒಪ್ಪಿಕೊಂಡಿತು.

 ಜನ್ಮದಿನಾಂಕ 1998,ನವೆಂಬರ್ 15 ಎಂದು ಉಲ್ಲೇಖಿಸಲಾಗಿರುವ ಬಾಲಕಿಯ ಮೆಟ್ರಿಕ್ ಪರೀಕ್ಷೆಯ ಪ್ರಮಾಣಪತ್ರದ ಆಧಾರದಲ್ಲಿ ಆಕೆ ಅಪ್ರಾಪ್ತ ವಯಸ್ಕಳಾಗಿದ್ದಾಳೆ ಎಂಬ ಅಂಶವನ್ನು ವಿಶೇಷ ಜಾಗೃತ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರ ಕುಮಾರ ಸಿಂಗ್ ಅವರು ಒಪ್ಪಿದರು. ಇದು ಆಕೆಯನ್ನು ಬೇವೂರು ಮಾದರಿ ಜೈಲಿನಿಂದ ರಿಮಾಂಡ್ ಹೋಮ್‌ಗೆ ಸ್ಥಳಾಂತರಿಸಲು ಅವಕಾಶ ಕಲ್ಪಿಸಿದೆ.

ಹ್ಯುಮಾನಿಟೀಸ್‌ನಲ್ಲಿ ಅಗ್ರಸ್ಥಾನ ಪಡೆದಿದ್ದ ಬಾಲಕಿ ಮತ್ತು ವಿಜ್ಞಾನ ವಿಭಾಗದಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿ ಸುದ್ದಿಗಾರರು ತಮ್ಮ ವಿಷಯಗಳಿಗೆ ಸಂಬಂಧಿಸಿದಂತೆ ಕೇಳಿದ್ದ ಸರಳಪ್ರಶ್ನೆಗಳಿಗೆ ಹಾಸ್ಯಾಸ್ಪದ ಉತ್ತರಗಳನ್ನು ಕೊಟ್ಟಾಗ ಪರೀಕ್ಷೆಯಲ್ಲಿ ವಂಚನೆ ನಡೆದಿದೆ ಎನ್ನುವುದು ಬೆಳಕಿಗೆ ಬಂದಿತ್ತು. ಈ ಸಂದರ್ಶನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸರಕಾರವು ವಿಚಾರಣೆಗೆ ಆದೇಶಿಸುವಂತೆ ಮಾಡಿತ್ತು.

 ಜೂ.25ರಂದು ಬಿಹಾರ ಶಾಲಾ ಪರೀಕ್ಷಾ ಮಂಡಳಿ(ಬಿಎಸ್‌ಇಬಿ)ಯ ಕಚೇರಿಯಲ್ಲಿ ಮರುಪರೀಕ್ಷೆ ಬರೆದು ಹೊರಬರುತ್ತಿದ್ದಾಗ ಬಾಲಕಿಯನ್ನು ಬಂಧಿಸಲಾಗಿತ್ತು. ಮೆಟ್ರಿಕ್ ಪರೀಕ್ಷೆಯ ಪ್ರಮಾಣಪತ್ರದಂತೆ ಆಕೆಯ ವಯಸ್ಸು 17ವರ್ಷ,ಮೂರು ತಿಂಗಳು ಮತ್ತು ಒಂಬತ್ತು ದಿನಗಳಾಗಿರುವುದರಿಂದ ಆಕೆಯನ್ನು ಜೈಲಿಗೆ ಕಳುಹಿಸುವಂತಿಲ್ಲ.

ಬಾಲಕಿಯ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಿದ್ದ ಬಾಲನ್ಯಾಯ ಮಂಡಳಿಯ ಮಾಜಿ ಸದಸ್ಯ ಕೆ.ಡಿ.ಮಿಶ್ರಾ ಅವರು ಆಕೆಯ ಮೆಟ್ರಿಕ್ ಪ್ರಮಾಣಪತ್ರವನ್ನು ಸಲ್ಲಿಸಿದ್ದು, ಆಕೆ ಅಪ್ರಾಪ್ತ ವಯಸ್ಕಳಾಗಿದ್ದಾಳೆ ಎಂಬ ವಾದಕ್ಕೆ ಬಿಎಸ್‌ಇಬಿಯ ವಕೀಲರು ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X