Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಸ್ಜಿದುನ್ನಬವಿ ಸಮೀಪ ಸ್ಫೋಟ: ಕನಿಷ್ಠ...

ಮಸ್ಜಿದುನ್ನಬವಿ ಸಮೀಪ ಸ್ಫೋಟ: ಕನಿಷ್ಠ ಇಬ್ಬರು ಬಲಿ

ಸೌದಿಗೆ ಸ್ಫೋಟಕ ಸೋಮವಾರ

ವಾರ್ತಾಭಾರತಿವಾರ್ತಾಭಾರತಿ4 July 2016 11:08 PM IST
share
ಮಸ್ಜಿದುನ್ನಬವಿ ಸಮೀಪ ಸ್ಫೋಟ: ಕನಿಷ್ಠ ಇಬ್ಬರು ಬಲಿ

ಜಿದ್ದಾ, ಜು.4: ಮದೀನಾದ ಮಸ್ಜಿದುನ್ನಬವಿಯ ಸಮೀಪದ ಪ್ರದೇಶವೂ ಸೇರಿದಂತೆ ಸೌದಿ ಅರೇಬಿಯಾದಲ್ಲಿ ಸೋಮವಾರ ಮೂರು ಸ್ಫೋಟಗಳು ಸಂಭವಿಸಿದ್ದು, ಇಬ್ಬರು ಆತ್ಮಹತ್ಯಾ ಬಾಂಬರ್‌ಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಬೆಳಗಿನ ಜಾವ ಇಲ್ಲಿಯ ಅಮೆರಿಕನ್ ದೂತಾವಾಸದ ಮೇಲಿನ ಸಂಭಾವ್ಯ ಆತ್ಮಹತ್ಯಾ ಬಾಂಬ್ ದಾಳಿಯನ್ನು ರಾಜತಾಂತ್ರಿಕ ಭದ್ರತಾ ಅಧಿಕಾರಿಗಳು ವಿಫಲಗೊಳಿಸಿದ್ದರು. ಇದಾದ ಬಳಿಕ ಸಂಜೆ ಸೌದಿಯ ಕತೀಫ್ ಮತ್ತು ಮಸ್ಜಿದುನ್ನಬವಿ ಸಮೀಪ ಎರಡು ಸ್ಫೋಟಗಳು ಸಂಭವಿಸಿವೆ.

ಘಟನೆಯಲ್ಲಿ ಭದ್ರತಾ ಸಿಬ್ಬಂದಿಗಳಿಬ್ಬರು ಗಾಯಗೊಂಡಿದ್ದಾರೆನ್ನಲಾಗಿದೆ.

 ನಸುಕಿನ 2.15ರ ಸುಮಾರಿಗೆ ಸಮೀಪದ ಜಿದ್ದಾದ ಆಸ್ಪತ್ರೆಯೊಂದರ ಪಾರ್ಕಿಂಗ್ ಸ್ಥಳದ ಬಳಿ ಶಂಕಿತ ವ್ಯಕ್ತಿಯನ್ನು ಕಂಡ ಭದ್ರತಾ ಅಧಿಕಾರಿಗಳು ಆತನನ್ನು ಸಮೀಪಿಸಿದಾಗ ಆತ ತನ್ನ ದೇಹಕ್ಕೆ ಅಳವಡಿಸಿಕೊಂಡಿದ್ದ ಸ್ಫೋಟಕವನ್ನು ಸ್ಫೋಟಿಸಿದ್ದ. ಈ ಘಟನೆಯಲ್ಲಿ ಆತನೊಬ್ಬನೇ ಸಾವನ್ನಪ್ಪಿದ್ದಾನೆ ಎಂದು ಆಂತರಿಕ ಸಚಿವಾಲಯದ ವಕ್ತಾರರು ತಿಳಿಸಿದರು.

ಕಾರುಗಳು ಹಾನಿಗೀಡಾಗಿದ್ದು,ಇಬ್ಬರು ಭದ್ರತಾ ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಆತ್ಮಹತ್ಯಾ ಬಾಂಬರ್ ವಲಸಿಗನೆಂದು ಗುರುತಿಸಲಾಗಿದೆ ಎಂದು ಅಲ್-ಟರ್ಕಿ ಹೇಳಿದೆ. ಆದರೆ ಆತನ ರಾಷ್ಟ್ರೀಯತೆಯನ್ನು ಅದು ಬಹಿರಂಗಗೊಳಿಸಿಲ್ಲ.

 

ರಸ್ತೆಗಳಲ್ಲಿ ಮಾನವ ದೇಹದ ಅಂಗಾಂಗಗಳು ಹರಡಿ ಬಿದ್ದಿದ್ದನ್ನು ಕಂಡಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದರು. ನಿಜಕ್ಕೂ ಆತ ಆತ್ಮಹತ್ಯಾ ಬಾಂಬರ್ ಆಗಿದ್ದ,ಚೂರುಚೂರಾಗಿದ್ದ ಶವವನ್ನು ನಾನು ಕಂಡಿದ್ದೇನೆ ಎಂದು ಸ್ಥಳೀಯ ನಿವಾಸಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

ಸ್ಥಳೀಯ ಕಾಲಮಾನ ಸಂಜೆ ಏಳು ಗಂಟೆಗೆ ಕೆಲವೇ ನಿಮಿಷಗಳಿರುವಾಗ ಮೊದಲ ಸ್ಫೋಟ ಸಂಭವಿಸಿದ್ದು, ಮಸೀದಿಯ ಬಳಿ ನಿಲ್ಲಿಸಿದ್ದ ಕಾರೊಂದಕ್ಕೆ ಹಾನಿಯಾಗಿದೆ. ಅದರ ಬೆನ್ನಲ್ಲೇ ಇನ್ನೊಂದು ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X