ಮಲೆನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ

ಶಿವಮೊಗ್ಗ, ಜು.5: ಜಿಲ್ಲೆಯಾದ್ಯಂತ ಧಾರಾಕಾರ ವರ್ಷಧಾರೆ ಮುಂದುವರಿದಿದ್ದು, ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಮುಖ ನದಿಗಳ ಹರಿವಿನಲ್ಲಿ ಹೆಚ್ಚಳ ಕಂಡು ಬಂದಿದೆ. ತುಂಗಾ ನದಿಯು ಮೈದುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿದೆ. ಜಿಲ್ಲೆಯ ಬಹುತೇಕ ಎಲ್ಲೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ದೈನಂದಿನ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಹೊಸನಗರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಪ್ರವಾಹ ಭೀತಿ: ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶದಲ್ಲಿ ವರ್ಷಧಾರೆಯ ಆರ್ಭಟ ಜೋರಾಗಿರುವುದರಿಂದ ಪ್ರಮುಖ ನದಿಗಳ ಹರಿವಿನಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡು ಬಂದಿದೆ. ತುಂಗಾ ನದಿಯು ಮೈದುಂಬಿ ಹರಿಯಲಾರಂಭಿಸಿದೆ. ತಗ್ಗು ಪ್ರದೇಶದ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಬಳಿ ಅಪಾಯದ ಮಟ್ಟದಲ್ಲಿ ತುಂಗಾ ನದಿ ಹರಿಯುತ್ತಿದೆ. ಪಕ್ಷಿಧಾಮ ಹಾಗೂ ರಾಷ್ಟ್ರೀಯ ಹೆದ್ದಾರಿ ಜಲಾ ವೃತವಾ ಗುವುದನ್ನು ತಪ್ಪಿಸುವ ಉದ್ದೇಶದಿಂದ ಬುಧವಾರ ಶಿವಮೊಗ್ಗದ ತುಂಗಾ ಡ್ಯಾಂನಿಂದ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತುಂಗಾ ನದಿಯು ಮೈದುಂಬಿ ಹರಿಯುತ್ತಿದೆ. ಅಲ್ಲದೆ, ಶರಾವತಿ, ಭದ್ರಾ, ದಂಡಾವತಿ, ಕುಮುಧಾವತಿ, ವರದಾ ನದಿಗಳ ಹರಿವಿನ ಲ್ಲಿಯೂ ಏರಿಕೆ ಕಂಡು ಬಂದಿದೆ. ಜಲಪಾತಗಳು ಬೋರ್ಗ ರೆಯುತ್ತಿವೆ. ಹಳ್ಳ ಕೊಳ್ಳ, ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿದೆ. ಸಾಗರ ಪಟ್ಟಣದ ಬಸವನಹೊಳೆ ಡ್ಯಾಂ ಗರಿಷ್ಠ ಮಟ್ಟ ತಲುಪಿದೆ. ಭತ್ತ ನಾಟಿ ಹಾಗೂ ಬಿತ್ತನೆ ಕಾರ್ಯ ಚುರುಕುಗೊಂಡಿದೆ.
ಮಂಗಳವಾರ ಬೆಳಗ್ಗೆ 8:30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಏಳು ತಾಲೂಕು ವ್ಯಾಪ್ತಿಯಲ್ಲಿ ಬಿದ್ದ ಒಟ್ಟಾರೆ ಮಳೆಯ ಸರಾಸರಿ ಪ್ರಮಾಣ 51.46 ಮಿ.ಮೀ.
ಶಿವಮೊಗ್ಗ 48.40 ಮಿ.ಮೀ. ಭದ್ರಾವತಿ 36.40 ಮಿ.ಮೀ.
ತೀರ್ಥಹಳ್ಳ್ಲಿ 44.40 ಮಿ.ಮೀ.
ಸಾಗರ 66.80 ಮಿ.ಮೀ.
ಶಿಕಾರಿಪುರ 20.60 ಮಿ.ಮೀ.
ಸೊರಬ 45 ಮಿ.ಮೀ.
ಹೊಸನಗರ 98.60 ಮಿ.ಮೀ





