Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ ಕೋಡಿಗೆ ಬಂದರು: ಪರಿಸರ...

ಹೆಜಮಾಡಿ ಕೋಡಿಗೆ ಬಂದರು: ಪರಿಸರ ಇಲಾಖೆಯಿಂದ ಸಭೆ

ವಾರ್ತಾಭಾರತಿವಾರ್ತಾಭಾರತಿ6 July 2016 12:22 AM IST
share
ಹೆಜಮಾಡಿ ಕೋಡಿಗೆ ಬಂದರು: ಪರಿಸರ ಇಲಾಖೆಯಿಂದ ಸಭೆ

ಪಡುಬಿದ್ರೆ, ಜು.5: ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಸಂಬಂಧಿಸಿ ಮಂಗಳವಾರ ಜಿಲ್ಲಾಧಿಕಾರಿ ಆರ್. ವಿಶಾಲ್ ನೇತೃತ್ವದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸಾರ್ವಜನಿಕ ಅಹವಾಲು ಸಭೆ ಹೆಜಮಾಡಿ ಕೋಡಿಯ ಪಲಿಮಾರು ಮೊಗವೀರ ಸಭಾಗೃಹದಲ್ಲಿ ನಡೆಯಿತು.

ಸಾಮಾಜಿಕ ಹಾಗೂ ಆರ್ಥಿಕ ಹೊಣೆಗಾರಿಕೆಯ ಈ ಯೋಜನೆಗೆ ಪರಿಸರ ಇಲಾಖೆಯ ಅನುಮೋದನೆ ಬಳಿಕ ಆಡಳಿತಾತ್ಮಕ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ುನ್ನು ಪೂರ್ಣಗೊಳಿಸುವಂತೆ ಬಂದರು ಮತ್ತು ಮೀನುಗಾರಿ

ಕಾ ಇಲಾಖೆ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ 50:50 ಅನುದಾನ ದಲ್ಲಿ ನಿರ್ಮಾಣವಾಗಲಿರುವ ಈ ಯೋಜನೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಾಲ್ಕೈದು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಬಂದರು ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಟಿ.ಎಸ್. ರಾಥೋಡ್ ಮಾಹಿತಿ ನೀಡಿದರು.

ಯೋಜನೆಯ ವಿವರ: 
ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣಪತಿ ಭಟ್ ಯೋಜನೆಯ ಸಮಗ್ರ ಮಾಹಿತಿ ನೀಡಿದರು. ಹೆಜಮಾಡಿ ಕೋಡಿ ಶಾಂಭವಿ ಮತ್ತು ನಂದಿನಿ ಹೊಳೆಗಳು ಸಮುದ್ರ ಸೇರುವ ಅಳಿವೆಯ ದಕ್ಷಿಣ ಭಾಗದಲ್ಲಿ ಸುಸಜ್ಜಿತ ಬಂದರು ನಿರ್ಮಾಣಕ್ಕೆ ಇಲಾಖಾ ವರದಿಯಲ್ಲಿ ನೀಲಿನಕ್ಷೆ ತಯಾರಿಸಲಾಗಿದೆ. ಒಟ್ಟು 122.59 ಕೋ.ರೂ. ಅಂದಾಜು ವೆಚ್ಚದಲ್ಲಿ ಅಳಿವೆಯ ಎರಡೂ ಭಾಗಗಳಲ್ಲಿ ಅಲೆ ತಡೆಗೋಡೆ (692 ಮತ್ತು 781 ಮೀಟರ್) ನಿರ್ಮಾಣ, ಹರಾಜು ಕೇಂದ್ರ, ಬೋಟ್ ತಂಗುದಾಣ, ವಿಶ್ರಾಂತಿ ಕಟ್ಟಡಗಳು, ಆಡಳಿತ ಕಚೇರಿ, ಬೋಟ್ ರಿಪೇರಿ ಕೇಂದ್ರ, ಭದ್ರತಾ ಸಿಬ್ಬಂದಿ ಕಟ್ಟಡ, ಶೌಚಾಲಯ, ಬಲೆ ನೇಯುವ ಕೇಂದ್ರ, ರೇಡಿಯೊ ಸಂಪರ್ಕ ಕೇಂದ್ರ, ರೆಸ್ಟೋರೆಂಟ್, ಏರಿ ನಿರ್ಮಾಣ, ಸಹಿತ ಸುಸಜ್ಜಿತ ಬಂದರು ನಿರ್ಮಾಣವಾಗಲಿದೆ.

ಸ್ಥಳೀಯ ಮೀನುಗಾರಿಕೆ ಕುಂಠಿತ ಸಹಿತ ಹಲವು ಪ್ರಶ್ನೆಗಳನ್ನು ಮೀನುಗಾರ ಮುಖಂಡರಾದ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ್, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ವೈ.ಗಂಗಾಧರ ಸುವರ್ಣ, ಕೇಶವ ಕೋಟ್ಯಾನ್, ಯಶವಂತ್ ಮೆಂಡನ್, ರೇಣುಕಾ ಪುತ್ರನ್ ಜಿಲ್ಲಾಧಿಕಾರಿಯ ಗಮನಕ್ಕೆ ತಂದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೀರ್ತಿಕುಮಾರ್ ಉಪಸ್ಥಿತರಿದ್ದರು.
ಪಡುಬಿದ್ರೆಗೆ ಅಗ್ನಿಶಾಮಕ ದಳ: ಸಭೆಯಲ್ಲಿ ಸ್ಥಳೀಯ ನಿವಾಸಿ ಮುಹಮ್ಮದ್ ಅಲಿ ಮಾತನಾಡಿ, ಹೆಜಮಾಡಿಯಲ್ಲಿ ಬಂದರು ನಿರ್ಮಾಣವಾದರೂ ಅಗ್ನಿ ಶಾಮಕ ದಳದ ಪ್ರಸ್ತಾಪ ಇಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ವಿಶಾಲ್, ಈಗಾಗಲೇ ಪಡುಬಿದ್ರೆಯಲ್ಲಿ ಅಗ್ನಿಶಾಮಕ ದಳದ ಪ್ರಸ್ತಾವ ಇದ್ದು, ಸರಕಾರಿ ಜಾಗ ದೊರೆತ ತಕ್ಷಣ ಮಂಜೂರಾತಿ ನೀಡಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X