ನಾಳೆ ಅರಿವು ಕಾರ್ಯಕ್ರಮ
ಮಂಗಳೂರು, ಜು.5: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನುಗಳು ಹಾಗೂ ಮಾನವ ಸಾಗಣೆಯಿಂದ ತೊಂದರೆಗೊಳಗಾದವರಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಅರಿವು ಕಾರ್ಯಕ್ರಮ ಜು.7ರಂದು ಬೆಳಗ್ಗೆ 10 ಗಂಟೆಗೆ ಕದ್ರಿಯ ಬಾಲಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆೆ ತಿಳಿಸಿದೆ.
Next Story





