ತೆಂಕನಿಡಿಯೂರು: ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಉಡುಪಿ, ಜು.5: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೊದಲ ವರ್ಷದ ಪದವಿ ವಿದ್ಯಾರ್ಥಿ ಗಳಿಗಾಗಿ ಇತ್ತೀಚೆಗೆ ಅಭಿವಿನ್ಯಾಸ (ಒರಿಯಂಟೇಶನ್) ಕಾರ್ಯಕ್ರಮ ವನ್ನು ಕಾಲೇಜಿನಲ್ಲಿ ಆಯೋಜಿ ಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್.ಸಾಮಗ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತೆಂಕನಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಲೆ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮಹೇಶ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಸ್ವಾಗತಿಸಿದರು. ಪ್ರೊ.ರಾಧಾಕೃಷ್ಣ ವಂದಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಉಮೇಶ್ ಪೈ ಕಾರ್ಯಕ್ರಮ ನಿರೂಪಿಸಿದರು.
Next Story





