ಜು.7ರ ಪರೀಕ್ಷೆ ಮುಂದೂಡಿಕೆ
ಮಂಗಳೂರು, ಜು.6: ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಜು.7 ರಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿರುವುದರಿಂದ ಜು. 7 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣ ಕಾರ್ಯಕ್ರಮದ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.
ಪ್ರಥಮ ವರ್ಷದ ಬಿ.ಎ, ಬಿ.ಕಾಂ. ಮತ್ತು ಬಿ.ಬಿ.ಎಂ. ಪದವಿ ಪರೀಕ್ಷೆಯು ಜು.13 ಮತ್ತು ಎಲ್ಲಾ ಸ್ನಾತಕೋತ್ತರ ಪದವಿ ಪರೀಕ್ಷೆಯು ಜು.8 ರಂದು ನಡೆಯಲಿವೆ. ಈ ಬಗ್ಗೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವದ್ಯಾನಿಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story