ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ನೀಡಬೇಕು: ಸಂಜೀವ.ಕೆ ಮಠಂದೂರ್

ಮಂಗಳೂರು, ಜು.8; ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ ಸಂಜೀವ.ಕೆ ಮಠಂದೂರ್ ಒತ್ತಾಯಿಸಿದರು.
ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯಾ ಪತ್ರದಲ್ಲಿ ಉಲ್ಲೇಖಿಸಿರುವ ಅಧಿಕಾರಿಗಳನ್ನು ಮತ್ತು ಸಚಿವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಈಗಿನ ರಾಜ್ಯ ಸರಕಾರದ ಆಡಳಿತದಲ್ಲಿ ಯಾವ ಅಧಿಕಾರಿಯು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಸಚಿವರುಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡರುಗಳಾದ ಉಮಾನಾಥ್ ಕೋಟ್ಯಾನ್, ಸುದರ್ಶನ್, ರಾಮಚಂದ್ರ ಮಿಜಾರ್, ರವಿಚಂದ್ರ ಮಿಜಾರ್, ಸಂಜಯ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
Next Story





