ಹೊಸ್ಮಠ: ಕಾರುಗಳೆರಡರ ನಡುವೆ ಢಿಕ್ಕಿ
.jpg)
ಕಡಬ, ಜು.8: ಇಲ್ಲಿನ ಹೊಸ್ಮಠ ಸಮೀಪ ಹ್ಯುಂಡೈ ಐ20 ಕಾರು ಹಾಗೂ ಸ್ವಿಫ್ಟ್ ಕಾರಿನ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಸುಂಕದಕಟ್ಟೆಯ ಐ20 ಕಾರು ಬೈಕೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಆಲಂಕಾರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ತೀವ್ರತೆಗೆ ಕಾರುಗಳೆರಡೂ ಸಂಪೂರ್ಣ ನಜ್ಜುಗುಜ್ಜಾಗಿದೆ.
Next Story





