ಜು.11: ವಿಶ್ವ ಜನಸಂಖ್ಯಾ ದಿನಾಚರಣೆ
ಮಂಗಳೂರು, ಜು.8: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ ಎನ್ನೆಸ್ಸೆಸ್ ಘಟಕ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2016ನ್ನು ಜು.11ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





