ಹುತಾತ್ಮ ಪಿಎಸ್ಐ ಬಂಡೆ ಪತ್ನಿ ಮಲ್ಲಮ್ಮ ನಿಧನ

ಕಲಬುರಗಿ. ಜು.9: ಮೆದುಳು ಕ್ಯಾನ್ಸರ್ನಿಂದ ಬಳಲುತ್ತಿದ್ದ ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ (40)ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗಿನ ಜಾವ ತಮ್ಮ ಸಹೋದರಿಯ ಮನೆಯಲ್ಲಿ ಮೃತಪಟ್ಟಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ ಅವರು ಶಿವಾನಿ ಮತ್ತು ಸಾಯಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕಲಬುರಗಿಯಲ್ಲಿ 2014ರಲ್ಲಿ ಶಾರ್ಪ್ ಶೂಟರ್ ಮುನ್ನಾನೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಲ್ಲಿಕಾರ್ಜುನ ಬಂಡೆ ಬಲಿಯಾಗಿದ್ದರು.
Next Story





