Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಢಾಕಾ ದಾಳಿಯ ಶಂಕಿತ ಆರೋಪಿ ಸಾವು

ಢಾಕಾ ದಾಳಿಯ ಶಂಕಿತ ಆರೋಪಿ ಸಾವು

ಆತ ಅಮಾಯಕ; ಸಾವಿಗೆ ಪೊಲೀಸ್ ಚಿತ್ರಹಿಂಸೆ ಕಾರಣ: ಕುಟುಂಬಿಕರು

ವಾರ್ತಾಭಾರತಿವಾರ್ತಾಭಾರತಿ9 July 2016 6:19 PM IST
share
ಢಾಕಾ ದಾಳಿಯ ಶಂಕಿತ ಆರೋಪಿ ಸಾವು

ಢಾಕಾ, ಜು. 9: ಕಳೆದ ವಾರ ಢಾಕಾದ ಕೆಫೆಯೊಂದರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಶಂಕಿತ ಆರೋಪಿ ಎಂಬುದಾಗಿ ಪೊಲೀಸರು ಹೇಳಿರುವ ಬಾಂಗ್ಲಾದೇಶಿ ತರುಣನೊಬ್ಬನು ಪೊಲೀಸರ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ.

ಆದರೆ, ಆತ ಒತ್ತೆಯಾಳು ಆಗಿದ್ದು, ಭದ್ರತಾ ಪಡೆಗಳ ಹಿಂಸೆಯಿಂದಾಗಿ ಮೃತಪಟ್ಟಿದ್ದಾನೆ ಎಂದು ಆತನ ಕುಟುಂಬ ಹೇಳಿಕೊಂಡಿದೆ.

ಭಯೋತ್ಪಾದಕ ದಾಳಿ ನಡೆದ ಹೋಲಿ ಆರ್ಟಿಸಾನ್ ಬೇಕರಿಯಲ್ಲಿ ಅಡುಗೆ ಸಹಾಯಕನಾಗಿದ್ದ 18 ವರ್ಷದ ಝಾಕಿರ್ ಹುಸೈನ್ ಶಾವನ್‌ನನ್ನು ಪೊಲೀಸರು ಬಂಧಿಸಿದ್ದರು.

ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ 18 ವಿದೇಶೀಯರು ಸೇರಿದಂತೆ 22 ಮಂದಿ ಮೃತಪಟ್ಟಿದ್ದರು.

ಪೊಲೀಸರು ಐವರು ಭಯೋತ್ಪಾದಕರನ್ನು ಹತ್ಯೆಗೈದು ಶಾವನ್ ಮತ್ತು ಇನ್ನೊಬ್ಬನನ್ನು ‘‘ಸಂಶಯಾಸ್ಪದ ಚಟುವಟಿಕೆಗಳನ್ನು’’ ನಡೆಸಿದ ಆರೋಪದಲ್ಲಿ ಬಂಧಿಸಿದ್ದರು. ಶಾವನ್ ಓರ್ವ ಶಂಕಿತ ಎಂಬುದಾಗಿ ಪೊಲೀಸರು ಪರಿಗಣಿಸಿದ್ದರು.

ಆದರೆ, ಪೊಲೀಸರ ಈ ಆರೋಪವನ್ನು ಶಾವನ್‌ನ ಕುಟುಂಬ ಸದಸ್ಯರು ತಿರಸ್ಕರಿಸಿದ್ದಾರೆ. ಇತರ ಸಂತ್ರಸ್ತರಂತೆ ಆತನನ್ನೂ ಒತ್ತೆಯಾಳನ್ನಾಗಿರಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಐದು ದಿನಗಳ ಕಾಲ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾವನ್ ಶುಕ್ರವಾರ ರಾತ್ರಿ ತೀವ್ರ ನಿಗಾ ಘಟಕದಲ್ಲಿ ಮೃತಪಟ್ಟಿದ್ದಾನೆ.

ತನ್ನ ಮಗನ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಶಾವನ್‌ನ ತಂದೆ ಅಬ್ದುಸ್ ಸತ್ತಾರ್ ಆಗ್ರಹಿಸಿದ್ದಾರೆ. ತನ್ನ ‘‘ಅಮಾಯಕ ಮಗ ಕುಟುಂಬದ ಪ್ರಮುಖ ಆಧಾರಸ್ತಂಭವಾಗಿದ್ದ’’ ಹಾಗೂ ಹಿಂಸೆಯಿಂದಾಗಿ ಆತ ಮೃತಪಟ್ಟಿದ್ದಾನೆ ಎಂದು ತಂದೆ ಆರೋಪಿಸಿದ್ದಾರೆ.

 ದಾಳಿಯಲ್ಲಿ ಶಾವನ್‌ನ ಶಾಮೀಲಾಗಿದ್ದಾನೆಯೇ ಎಂಬ ಬಗ್ಗೆ ಸಂಶಯವಿದೆ ಎಂದು ಪ್ರಮುಖ ಮಾನವಹಕ್ಕುಗಳ ಗುಂಪು ‘ಐನ್ ಒ ಸಲಿಶ್ ಕೇಂದ್ರ’ದ ಮುಖ್ಯಸ್ಥ ನೂರ್ ಖಾನ್ ಲಿಟನ್ ಹೇಳಿದ್ದಾರೆ.

‘‘ಐವರು ಭಯೋತ್ಪಾದಕರ ಹೆಸರುಗಳನ್ನು ಐಸಿಸ್ ಹೇಳಿದೆ. ಆ ಎಲ್ಲ ಐದು ಮಂದಿಯನ್ನು ಪೊಲೀಸರು ಗುರುತಿಸಿದ್ದಾರೆ. ಆ ಐವರ ಪೈಕಿ ಶಾವನ್ ಇರಲಿಲ್ಲ’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X