Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣದಲ್ಲೂ ‘ಗೋ ತೆರಿಗೆ’ ಪ್ರಸ್ತಾವ

ಹರ್ಯಾಣದಲ್ಲೂ ‘ಗೋ ತೆರಿಗೆ’ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ9 July 2016 7:52 PM IST
share
ಹರ್ಯಾಣದಲ್ಲೂ ‘ಗೋ ತೆರಿಗೆ’ ಪ್ರಸ್ತಾವ

ಚಂಡಿಗಡ, ಜು.9: ಪಂಜಾಬ್‌ನ ಬಳಿಕ ಇದೀಗ ಹರ್ಯಾಣದಲ್ಲಿ ಗೋ ಸಂರಕ್ಷಣೆಗೆ ನಿಧಿಯನ್ನು ಕ್ರೋಡೀಕರಿಸಲು ‘ಗೋ ತೆರಿಗೆ’ ಹೇರುವಂತೆ ರಾಜ್ಯದ ಬಿಜೆಪಿ ಸರಕಾರದ ಮುಂದೆ ಪ್ರಸ್ತಾವವೊಂದನ್ನಿರಿಸಲಾಗಿದೆ.
ರಾಜ್ಯದಲ್ಲಿ ಗೋವುಗಳ ಕಲ್ಯಾಣಕ್ಕಾಗಿ ನಿಧಿಯೊಂದನ್ನು ಸೃಷ್ಟಿಸಲು ಬ್ಯಾಂಕ್ವೆಟ್ ಹಾಲ್ ಬುಕ್ಕಿಂಗ್‌ನ ಮೇಲೆ ರೂ.2,100, ಮನೋರಂಜನೆ ತೆರಿಗೆ ಸಂಗ್ರಹದ ಮೇಲೆ ಶೇ.5, ಒಂದು ಚೀಲ ಆಹಾರ ಧಾನ್ಯದ ಮೇಲೆ ರೂ.1 ತೆರಿಗೆ ವಿಧಿಸಬೇಕು ಹಾಗೂ ರಾಜ್ಯ ಸರಕಾರದ ವ್ಯವಸ್ಥಾಪನದಲ್ಲಿರುವ ದೇವಾಲಯಗಳ ಕಾಣಿಕೆ ಸಂಗ್ರಹದ ಶೇ.50ರಷ್ಟನ್ನು ಬಳಸಬೇಕೆಂಬ ಪ್ರಸ್ತಾವವನ್ನು ಹರ್ಯಾಣ ಗೌ ಸೇವಾ ಆಯೋಗವು ಸರಕಾರದ ಮುಂದಿರಿಸಿದೆ.
ರಾಜ್ಯದ ಗೋವುಗಳ ಕಲ್ಯಾಣಕ್ಕಾಗಿ ನಿಧಿಯೆತ್ತಲು ತಾವು ಹರ್ಯಾಣ ಸರಕಾರದ ಮುಂದೆ ಪ್ರಸ್ತಾಪವೊಂದನ್ನಿರಿಸಿದ್ದೇವೆ. ಈ ರೀತಿ ಸಂಗ್ರಹಿಸಲಾದ ನಿಧಿಯನ್ನು ಗೋವುಗಳ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗುವುದು. ಪ್ರಸ್ತಾಪವು ಸರಕಾರದ ಪರಿಶೀಲನೆಯಲ್ಲಿದೆಯೆಂದು ಹರ್ಯಾಣ ಗೌ ಸೇವಾ ಆಯೋಗದ ಅಧ್ಯಕ್ಷ ಭಣಿರಾಮ್ ಮಂಗ್ಲಾ ಇಂದು ತಿಳಿಸಿದ್ದಾರೆ.
ಹರ್ಯಾಣದ ಗೋಶಾಲೆಗಳಲ್ಲಿ 3.20 ಲಕ್ಷ ಗೋವುಗಳಿದ್ದು, 1.17 ಲಕ್ಷ ಬೀಡಾಡಿ ದನಗಳಿವೆಯೆಂದು ಅವರು ಹೇಳಿದ್ದಾರೆ.
  ಪಂಜಾಬ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಇಲಾಖೆಯು ಈಗಾಗಲೇ ‘ಗೋ ತೆರಿಗೆ’ಯ ಕುರಿತು ಪ್ರಸ್ತಾವಿಸಿದೆ. ದ್ವಿಚಕ್ರ, ನಾಲ್ಕು ಚಕ್ರಗಳ ವಾಹನಗಳು, ತೈಲ ಟ್ಯಾಂಕರ್ ಖರೀದಿ, ವಿದ್ಯುತ್ ಬಳಕೆ, ಹವಾನಿಯಂತ್ರಿತ ಮದುವೆ ಹಾಲ್‌ಗಳು, ಸಾಮಾನ್ಯ ಹಾಲ್‌ಗಳು, ಸಿಮೆಂಟ್ ಚೀಲ, ಭಾರತದಲ್ಲಿ ತಯಾರಿಸಿದ ವಿದೇಶಿ ಮದ್ಯ ಹಾಗೂ ಪಂಜಾಬ್ ಮೀಡಿಯಂ ಲಿಕ್ಕರ್‌ಗಳ ಮೇಲೆ ತೆರಿಗೆ ವಿಧಿಸುವ ಮೂಲಕ ನಿಧಿ ಸಂಗ್ರಹಿಸುವಂತೆ ಅದು ಸಲಹೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X