Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ಝಾಕಿರ್ ನಾಯ್ಕ್ ರನ್ನು ಚರ್ಚಾ...

ಡಾ.ಝಾಕಿರ್ ನಾಯ್ಕ್ ರನ್ನು ಚರ್ಚಾ ವಿಷಯವನ್ನಾಗಿಸುವುದು ಸಂವಿಧಾನಕ್ಕೆ ವಿರುದ್ಧ: ಜಮಾಅತೆ ಇಸ್ಲಾಮೀ ಹಿಂದ್

ವಾರ್ತಾಭಾರತಿವಾರ್ತಾಭಾರತಿ9 July 2016 9:48 PM IST
share
ಡಾ.ಝಾಕಿರ್ ನಾಯ್ಕ್ ರನ್ನು ಚರ್ಚಾ ವಿಷಯವನ್ನಾಗಿಸುವುದು ಸಂವಿಧಾನಕ್ಕೆ ವಿರುದ್ಧ: ಜಮಾಅತೆ ಇಸ್ಲಾಮೀ ಹಿಂದ್

ಮಂಗಳೂರು, ಜು. 9: ಅಂತಾರಾಷ್ಟ್ರೀಯ ಖ್ಯಾತಿಯ ಮುಸ್ಲಿಂ ಧಾರ್ಮಿಕ ವಿದ್ವಾಂಸ ಡಾ.ಝಾಕಿರ್ ನಾಯ್ಕ್ ರನ್ನು ಸರಕಾರದ ಕೆಲವು ವ್ಯಕ್ತಿಗಳು ಮತ್ತು ಮಾಧ್ಯಮದ ಕೆಲವು ವಲಯಗಳ ಮೂಲಕ ನಕಾರಾತ್ಮಕ ರೀತಿಯಲ್ಲಿ ಚರ್ಚಾ ವಿಷಯವನ್ನಾಗಿ ಮಾಡುವ ಪ್ರಯತ್ನವನ್ನು ಜಮಾಅತೆ ಇಸ್ಲಾಮೀ ಹಿಂದ್ ಸಂವಿಧಾನದಲ್ಲಿ ನೀಡಲಾಗಿರುವ ವಿಚಾರ ಮತ್ತು ಅಭಿವ್ಯಕ್ತಿ ಸ್ವಾತಂತ್ರದ ಭದ್ರತೆಯನ್ನು ಸಂಘರ್ಷಿಸುವ, ಅನಗತ್ಯ ವ್ಯರ್ಥ ಮತ್ತು ಕಳವಳಕಾರಿ ಕೃತ್ಯ ಎಂದು ಪರಿಗಣಿಸಿ ಅದರಿಂದ ದೂರವಿರುವಂತೆ ಸಲಹೆ ನೀಡಿದೆ.

ಡಾ.ಝಾಕಿರ್ ನಾಯ್ಕ್ ದೇಶದ ಇತರ ಧರ್ಮಗಳ ನೂರಾರು ಖ್ಯಾತ ವ್ಯಕ್ತಿಗಳಂತೆ ಈ ಕಾಲದ ಎಲ್ಲ ಲಭ್ಯ ಪ್ರಚಾರ ಮಾಧ್ಯಮಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಸಂವಿಧಾನದ ಚೌಕಟ್ಟಿನಲ್ಲಿದ್ದುಕೊಂಡು ಸಭ್ಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಏಕದೇವತ್ವ, ಪ್ರವಾದಿತ್ವ ಮತ್ತು ಪರಲೋಕವೆಂಬ ಇಸ್ಲಾಮಿನ ಸಂದೇಶವನ್ನು, ಅತ್ಯಂತ ಸೌಹಾರ್ದಮಯ ವಾತಾವರಣದಲ್ಲಿ ಮುಂದಿಡುತ್ತಾ ಬಂದಿದ್ದಾರೆ. ಇದನ್ನು ಈ ದೇಶದ ಮಾತ್ರವಲ್ಲ ಲೋಕದಾದ್ಯಂತ ಕೋಟಿಗಟ್ಟಲೆ ಜನರು ಬಹಳ ಗಮನಕೊಟ್ಟು ಆಸಕ್ತಿಯೊಂದಿಗೆ ಕೇಳುತ್ತಾ ಇದ್ದಾರೆ. ಅವುಗಳಲ್ಲಿ ಸಂವಿಧಾನ ಮತ್ತು ಸದಾಚಾರಕ್ಕೆ ವಿರುದ್ಧವಾದ ಯಾವುದನ್ನೂ ಹೇಳುತ್ತಿಲ್ಲವೆಂದು ಜಮಾಅತೆ ಇಸ್ಲಾಮಿ ಹಿಂದ್‌ನ ಉಪಾಧ್ಯಕ್ಷ ನುಸ್ರತ್ ಅಲಿ ಹೇಳಿದ್ದಾರೆ.

ವಿಚಿತ್ರವೇನೆಂದರೆ ಈಗ ಹಠಾತ್ತನೆ ಅವರ ಮಾನವೀಯ ಸೇವೆಗಳನ್ನು ವಿಶ್ಲೇಷಣೆಗೊಳಪಡಿಸುವ ಅಗತ್ಯವನ್ನು ಹೇಳಿ, ಅದಕ್ಕೆ ಒಂದು ವಿಶಿಷ್ಟ ಬಣ್ಣವನ್ನು ಬಳಿದು ದೇಶದಲ್ಲಿ ಮೊದಲೇ ಇರುವ ಕೋಮು ಸಂಘರ್ಷಾವಸ್ಥೆಯನ್ನು ಇನ್ನಷ್ಟು ಕೆಡಿಸುವ ನೀಚ ಪ್ರಯತ್ನ ನಡೆಸಲಾಗುತ್ತಿದೆ ಎಂದಿದ್ದಾರೆ.

ಸರಕಾರ ಮತ್ತು ಮಾಧ್ಯಮಗಳಿಗೆ ತಾತ್ಕಾಲಿಕ ಮತ್ತು ಹಂಗಾಮೀ ಹಿತಾಸಕ್ತಿಗಳ ಉದ್ದೇಶದಿಂದ ಇಂತಹ ಕ್ರಮ ಮತ್ತು ನೀತಿ ಭೂಷಣವಲ್ಲ. ಇದರಿಂದ ಸಂವಿಧಾನದ ಮೂಲಕ್ಕೆ ಪ್ರಹಾರ ಬೀಳುತ್ತದೆ. ದೇಶದ ಪರಂಪರೆಗೆ ವಿರುದ್ಧವಾಗುತ್ತದೆ. ದೇಶೀಯ ಮತ್ತು ಜಾಗತಿಕ ಮಟ್ಟದಲ್ಲಿ ನಮ್ಮ ನೆಚ್ಚಿನ ದೇಶದ ಚಿತ್ರಣ ಮಸುಕಾಗುತ್ತದೆ. ದೇಶದಲ್ಲಿ ಅನೇಕ ಮೂಲಭೂತ ಸಮಸ್ಯೆಗಳಿವೆ. ವಿದೇಶಗಳಲ್ಲಿರುವ ಭಾರಿ ಮೊತ್ತದ ಕಳ್ಳ ಹಣ ದೇಶಕ್ಕೆ ತರುವುದರಿಂದ ಹಿಡಿದು ಬಡತನ, ದಾರಿದ್ರ ನಿರ್ಮೂಲನೆ, ನಿರ್ಮಾಣ ಅಭಿವೃದ್ಧಿಯ ಅನೇಕ ಅಪೂರ್ಣ ಕೆಲಸಗಳು ಇತ್ಯಾದಿಗಳ ಕಡೆಗೆ ಹೆಚ್ಚು ಗಮನ ಕೊಡುವ ಅಗತ್ಯವಿದೆ. ಸರಕಾರವು ಇಂತಹ ಮೂಲಭೂತ ಸೌಲಭ್ಯಗಳ ಕಡೆಗೆ ಪ್ರಾಮಾಣಿವಾಗಿ ಗಮನ ಹರಿಸುವುದು ಉತ್ತಮ. ಇದು ಅವರ ಹೊಣೆಗಾರಿಕೆಯೂ ಆಗಿದೆ ಎಂದು ನುಸ್ರತ್ ಅಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X